ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ ಬೋಟುಗಳಿಗೆ ಬೆಂಕಿ ತಗಲಿ ,11 ಬೋಟುಗಳು ಸುಟ್ಟು ಕರಕಲಾಗಿದೆ.
ವಿಡಿಯೋ ವೀಕ್ಷಿಸಿ :
ಬಂದರಿನಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪಟಾಕಿ ಸಿಡಿದು ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ,
ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಈ ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಅಗ್ನಿಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು.