23.5 C
Karnataka
April 4, 2025
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ



ಮುಂಬಯಿ : ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 24 ವರ್ಷಗಳ ಹಿಂದೆ ಮುಂಬಯಿಯ ಉದ್ಯಮಿ, ಸಮಾಜಸೇವಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಇವರ ಮುಂದಾಳುತ್ವದಲ್ಲಿ ಸ್ಥಾಪನೆಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ವತಿಯಿಂದ ನ. 18, ಶನಿವಾರ ಬೆಳಿಗ್ಗೆ 10:30 ರಿಂದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಹಾಗೂ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರಭೂಮಿಗಳಲ್ಲಿ  ವಿದ್ಯುತ್ ಚಿತೆ ನಿರ್ಮಿಸುವ ಯೋಜನೆ ಬಗ್ಗೆ ಸಮಾಲೋಚನಾ ಸಭೆಯು “ಶೇಷಶಯನ ಸಭಾಗೃಹ ಕಿದಿಯೂರು ಹೋಟೆಲ್,” ಉಡುಪಿ ಇಲ್ಲಿ ನಡೆಯಲಿದೆ.

ಸಮಿತಿಯ ಅಧ್ಯಕ್ಷರಾದ ಎಲ್ ವಿ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭವನ್ನು ಕರ್ನಾಟಕ ಸರ್ಕಾರದ  ಮೀನುಗಾರಿಕಾ ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಮಾಂಕಾಳ್ ವೈದ್ಯ ಇವರು ಉದ್ಘಾಟಿಸಲಿರುವರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮತ್ತು ಬಂದರು ಜಲಸಾರಿಗೆ ಸಚಿವರಾದ ಶ್ರೀಪಾದ ನಾಯ್ಕ, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್,  ರಾಜ್ಯ ಸರಕಾರದ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕದ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ವಿನಯ್ ಕುಮಾರ್ ಸೊರಕೆ, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮತ್ತು ಸಮಿತಿಯ ಅಂತರಾಷ್ಟ್ರೀಯ ಉಪಾಧ್ಯಕ್ಷರಾದ ಯುಎಇ  ಯ ಡಾ. ಡೇವಿಡ್  ಫ್ರಾಂಕ್ ಫೆರ್ನಾಂಡಿಸ್ ಉಪಸ್ಥಿತರಿರುವರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಡಿ. ಆರ್. ರಾಜು ಅವರು ಪ್ರಸ್ತಾವನೆಯ ಮಾತುಗಳನ್ನು ಆಡಲಿರುವರು. ಈ ಸಮಾರಂಭಕ್ಕೆ ಸ್ಥಳೀಯ  ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ಪರವಾಗಿ ಗೌ. ಅಧ್ಯಕ್ಷರಾದ ಪದ್ಮ ವಿಭೂಷಣ ಡಾ. ಬಿ. ಎಂ. ಹೆಗ್ಡೆ,  ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಗೌ. ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಮಾಜಿ ಅಧ್ಯಕ್ಷರುಗಳು,  ಉಪಾಧ್ಯಕ್ಷರುಗಳು, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಹಾಗೂ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ. ಕಾರ್ಯಕ್ರಮದ ಬಳಿಕ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ ಯಲ್ಲಿ ಕಾರ್ತಿಕ ಮಾಸದ ದೀಪೋತ್ಸವ

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಜ. ‌26 ರಂದು” ‘ಮುಲುಂಡ್  ಪಶ್ಚಿಮದಲ್ಲಿ *ಲಗ್ನಾ  ಪಿಶ್ಶ್ಯೆ’  ,ಕೊಂಕಣಿ ನಾಟಕ

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk