
ಮುಂಬೈ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಮೈಸೂರು ಅಸೋಸಿಯೇಷನ್ ನ ವತಿಯಿಂದ ಕನಕ ಜಯಂತಿ ಆಚರಣೆಯು ನವೆಂಬರ್ 25ರಂದು ಶನಿವಾರ ಸಂಜೆ 5.30ಕ್ಕೆ ಮಾಟು0ಗ
ಭಾವು ದಾಜಿ ರಸ್ತೆಯ ಸಂಘದ ಕಿರು ಸಭಾಗ್ರಹದಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ 2023ರ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭವು ಜರಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ – 2023 ರ ವಿಜೇತರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಲಿದೆ.
ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಅಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 2403 7065 ಸಂಪರ್ಕಿಸಬಹುದು.
.