
ನವಿ ಮುಂಬಯಿ ನ 23. ಕರ್ನಾಟಕ ಸಂಘ ಪನ್ವೆಲ್ ನಲ್ಲಿ ತಾರೀಕು 26 /11 /2023 ರವಿವಾರ ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಸಂಘದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಪದ್ಮ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಗುವುದು .
ಈ ಪ್ರಯುಕ್ತ ಅದೇ ದಿನ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಘದಲ್ಲಿ ರಕ್ತದಾನ ಶಿಬಿರವು ನೆರವೇರಲಿರುವುದು. ಸಂಜೆ 4:30 ಗಂಟೆಯಿಂದ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನದ ಆಚರಣೆ ಕಾರ್ಯಕ್ರಮವು ನಡೆಯಲಿದ್ದು, ಸದಸ್ಯರಿಂದ ಹಾಗೂ ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ನಡೆಯಲಿರುವುದು.
ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಅವರು ವಹಿಸಿಕೊಳ್ಳುವರು .ಮುಖ್ಯ ಅತಿಥಿಗಳಾಗಿ ಗೊರೆಗಾವ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ದೇವಲ್ಕುಂದ ಭಾಸ್ಕರ್ ಶೆಟ್ಟಿ ಅವರು ಹಾಗೂ ಕನ್ನಡ ಭವನ ಎಜುಕೇಶನ್ ಸೊಸೈಟಿಯ ಶಾಲೆಯ ಮುಖ್ಯೋಪಾದಾಯಿನಿ ಅಮೃತ ಶೆಟ್ಟಿ ಅವರು ಉಪಸ್ಥಿತರಿರುವರು. ಜೊತೆಗೆ ಸಂಘದ ಕಾರ್ಯ ಧ್ಯಕ್ಷರಾಗಿರುವ ನಗರ ಸೇವಕರಾದ ಸಂತೋಷ್ .ಜಿ. ಶೆಟ್ಟಿಯವರು, ಸಂಘದ ಪದಾಧಿಕಾರಿಗಳು ಹಾಗೂ ಮಹಿಳಾ ವಿಭಾಗದ ಅಧ್ಯಕ್ಷ ಶಶಿಕಲಾ ದಾಬ್ಕೆ ಅವರು ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಸದಸ್ಯರೊಂದಿಗೆ ದೀಪಾವಳಿ ಹಬ್ಬದ ಆಚರಣೆಯ ಕಾರ್ಯಕ್ರಮವು ನಡೆಯಲ್ಪಡುತ್ತದೆ. ಕೊನೆಗೆ ಪ್ರೀತಿ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಸಂಪೂರ್ಣ ಒಂದು ದಿನ ಪೂರ್ತಿಯ ಈ ಎಲ್ಲ ಕಾರ್ಯಕ್ರಮಕ್ಕೆ ಎಲ್ಲಾ ಸದಸ್ಯರು ಹಾಗೂ ಪರಿಸರದ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕರ್ನಾಟಕ ಸಂಘದ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ವಿನಂತಿಸಿರುತ್ತಾರೆ.