
ಚಿತ್ರ ವರದಿ ದಿನೇಶ್ ಕುಲಾಲ್
ಉಡುಪಿ ನ 24.
ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 24 ವರ್ಷಗಳ ಹಿಂದೆ ಮುಂಬಯಿಯ ಉದ್ಯಮಿ, ಸಮಾಜಸೇವಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಇವರ ಮುಂದಾಳುತ್ವದಲ್ಲಿ ಸ್ಥಾಪನೆಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ವತಿಯಿಂದ ನ. 18, ಶನಿವಾರ ಕರಾವಳಿ ಕರ್ನಾಟಕದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಹಾಗೂ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರಭೂಮಿಗಳಲ್ಲಿ ವಿದ್ಯುತ್ ಚಿತೆ ನಿರ್ಮಿಸುವ ಯೋಜನೆ ಬಗ್ಗೆ ಸಮಾಲೋಚನಾ ಸಭೆಯು “ಶೇಷಶಯನ ಸಭಾಗೃಹ ಕಿದಿಯೂರು ಹೋಟೆಲ್,” ಉಡುಪಿ ಇಲ್ಲಿ ನಡೆಯಲಿದೆ. ಸಮಿತಿಯ ಅಧ್ಯಕ್ಷರಾದ ಎಲ್ ವಿ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಡಿ ಆರ್ ರಾಜು ಅವರು ದೊಡ್ಡ ಪ್ರಮಾಣದ ಸಿವಿಲ್ ಗುತ್ತಿಗೆದಾರರಾಗಿದ್ದು, ಸುಮಾರು 50 ಎಕರೆಗಳಷ್ಟು ಕಾಫಿ ಎಸ್ಟೇಟ್ ಮತ್ತು ಇತರ ವ್ಯವಹಾರಗಳನ್ನು ಹೊಂದಿದ್ದಾರೆ . ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ರಾಜಕೀಯ ಸಂಪರ್ಕಗಳನ್ನು ಹೊಂದಿರುವ ಅತ್ಯಂತ ಪ್ರತಿಷ್ಠಿತ ವ್ಯಕ್ತಿತ್ವ.ರಾಜಕಾರಣಿ. ಸಾಮಾಜಿಕ ಸೇವಾ ಸಂಘಟನೆಗಳಲ್ಲಿ ತೊಡಗಿಕೊಂಡವರು ಕಾರ್ಕಳದ ಬಿಲ್ಲವ ಸಂಘಟನೆ ಎಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡವರು.
ಅರುಣ್‌ಪ್ರಕಾಶ್ ಶೆಟ್ಟಿ ಅವರು ಮಾಜಿ ಬ್ಯಾಂಕರ್. ಹಲವಾರು ಹೋಟೆಲ್ ಗಳ ಮಾಲಕರು. , ಬಿಲ್ಡರ್ ಮತ್ತು ಲ್ಯಾಂಡ್ ಡೆವಲಪರ್ ಕಾರ್ಯನಿರ್ವಹಿಸುತ್ತಿದ್ದಾರೆ ಬಂಟ ಸಮಾಜದ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ . ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್. ವಿ. ಅಮೀನ್ .ಅಂತರಾಷ್ಟ್ರೀಯ ಉಪಾಧ್ಯಕ್ಷರಾದ ಯುಎಇ ಯ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್. ಸಮಿತಿ ಉಪಾಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಗೌರವ ಕೋಶಾಧಿಕಾರಿ ತುಳಸಿದಾಸ್ ಎಲ್. ಅಮೀನ್, ಪ್ರದೀಪ್ ಎನ್.ಆರ್. ಕಾರ್ಕಳ, ಗೌರವ ಕಾರ್ಯದರ್ಶಿ ಪ್ರೊ. ಶಂಕರ್, ಮಾಜಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ಧರ್ಮಪಾಲ್ ಯು. ದೇವಾಡಿಗ .ಜಿಲ್ಲಾ ಸಮಿತಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಉಪಸ್ಥಿತರಿದ್ದರು.