
ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾರ್ಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ ಕರ್ಕೇರಾ ಹೊಸಬೆಟ್ಟು ಅವರಿಗೆ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಪ್ರಧಾನ ಮಾಡಿದರು.
ಅವರು ನಾಡ ದೋಣಿ ಮೀನುಗಾರರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕರ್ನಾಟಕ ಪರ್ಷಿನ್ ಮೀನುಗಾರರ ಸಂಘದ ಅಧ್ಯಕ್ಷರಾಗಿ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದರ ಸಮಿತಿ ಉಪಾಧ್ಯಕ್ಷ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದರ ಸಮಿತಿ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮೂರು ದರ್ಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡಿದೆ.