April 2, 2025
ಸುದ್ದಿ

ಪತ್ರಕರ್ತರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ

ಮಂಗಳೂರು ಡಿ 10, ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ  ನೇತೃತ್ವದ ತಂಡದಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಐಕಳದಲ್ಲಿರುವ ಹರೀಶ್ ಶೆಟ್ಟಿಯವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚೆಗೆ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದ ಜವಾಬ್ದಾರಿ ಮತ್ತು ಸಮ್ಮೇಳನವನ್ನು ಅದ್ದೂರಿಯಾಗಿ ಸಂಘಟಿಸಿ ಬಂಟ ಸಮಾಜ ಇತರ ಸಮಾಜದ ಪರ ಕಾಳಜಿ ವಹಿಸಿ ಕೆಲಸ ಮಾಡಿದ ಐಕಳ ಹರೀಶ್ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಶಾಲು ಹೊದಿಸಿ ಗೌರವಿಸಿದರು. 

ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಹರೀಶ್ ರೈ ಮಾತನಾಡಿ ಐಕಳ ಹರೀಶ್ ಶೆಟ್ಟಿ ಅವರು ಸದಾ ಸಮಾಜದ ಏಳಿಗೆಗಾಗಿ ಕೆಲಸ ಮಾಡಿದವರು ಜೊತೆಗೆ ಬೇರೆ ಸಮಾಜವನ್ನೂ ಪ್ರೀತಿಸಿ ಕಷ್ಟದಲ್ಲಿದ್ದವರಿಗೆ ಆರ್ಥಿಕ ಸಹಾಯ ನೀಡಿದವರು. ವಿಶ್ವ ಬಂಟರ ಸಮ್ಮೇಳನದ ಮೂಲಕ ಎಲ್ಲಾ ಬಂಟರನ್ನು ಒಂದೇ ಸೂರಿನಡಿ ಸೇರಿಸುವ ಕೆಲಸ ಮಾಡಿದ್ದಾರೆ ಎಂದರು.

ರಾಜ್ಯ ಕ್ರಿಕೆಟ್ ಸಮಿತಿಯ ಸಂಚಾಲಕ ಅನ್ನು ಮಂಗಳೂರು ಮಾತನಾಡಿ ಐಕಳ ಹರೀಶ್ ಶೆಟ್ಟಿ ಅವರು ನನಗೆ ಬಹಳ ವರ್ಷಗಳಿಂದ ಪರಿಚಯ. ಸಮಾಜದ ಪರ ಅವರಿಗೆ ಇರುವ ಚಿಂತನೆ, ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ. ಐಕಳರು ಕ್ರೀಡಾಪಟು, ದೇಹದಾಡ್ಯ ಪಟುವಾಗಿ ಅನೇಕ ಪ್ರಶಸ್ತಿಗಳನ್ನು ಗೆದ್ದವರು. ಕ್ರೀಡೆಯ ಬಗ್ಗೆ ಅವರಿಗಿರುವ ಆಸಕ್ತಿ, ಯುವಕರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದೇ ವೇಳೆ ಜನವರಿ 5 ರಿಂದ 7 ರ ವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಐಕಳ ಹರೀಶ್ ಶೆಟ್ಟಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಕ್ರೀಡಾ ಕೂಟದ ಬ್ರೋಶರ್ ನ್ನು ಬಿಡುಗಡೆಗೊಳಿಸಿದ ಐಕಳ ಹರೀಶ್ ಶೆಟ್ಟಿ ಅವರು ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಪಂದ್ಯಾಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಿಕಾಭವನ ಟ್ರಸ್ಟ್ ನ ಅಧ್ಯಕ್ಷ ಆರ್ ರಾಮಕೃಷ್ಣ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಸಂಘದ ಮಾಜೀ ಅಧ್ಯಕ್ಷ ಬಿ ರವೀಂದ್ರ ಶೆಟ್ಟಿ,  ಭಾಸ್ಕರ ರೈ ಕಟ್ಟ, ಪುಷ್ಪರಾಜ ಬಿ ಎನ್, ರಾಜೇಶ್ ಶೆಟ್ಟಿ ಕಾವೂರು, ನಿಶಾಂತ್ ಶೆಟ್ಟಿ ಕಿಲೆಂಜೂರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜನವರಿ 5 ರಿಂದ 7 ರ ವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಮೈದಾನದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಜರಗಲಿದೆ, ರಾಜ್ಯದ ಮೂವತ್ತು ಜಿಲ್ಲಾ ತಂಡ ಹಾಗೂ ಮುಂಬೈ ಮತ್ತು ಗಡಿನಾಡ ಕಾಸರಗೋಡು ತಂಡಗಳು ಭಾಗವಹಿಸಲಿದೆ.

Related posts

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk