24.7 C
Karnataka
April 3, 2025
Uncategorized

ರಘುಪತಿ ಭಟ್ ನೇತೃತ್ವದಲ್ಲಿ ಉಡುಪಿ ಪರ್ಯಾಯಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಪ್ರಮುಖರಿಗೆ ಆಹ್ವಾನ



ಉಡುಪಿಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಬಳಿಕ ವಿಧಾನ ಸಭೆಯ ಸಭಾಧ್ಯಕ್ಷರಾದ ಶ್ರೀ ಯು. ಟಿ. ಖಾದರ್, ಉಪ ಮುಖ್ಯಮಂತ್ರಿಯವರಾದ ಶ್ರೀ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಗೃಹ ಸಚಿವರಾದ ಶ್ರೀ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ. ಕೆ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಉಡುಪಿ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿ ಉಡುಪಿಯ ಜನತೆಯ ಪರವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್, ಶ್ರೀ ಯಶ್ ಪಾಲ್ ಸುವರ್ಣ, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳಿ ಹಾಗೂ ಪರ್ಯಾಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ರಾಜಪ್ರಭುತ್ವದ ಕನ್ನಡಿಯಲ್ಲಿ ಕಂಡ ‘ಕಾಮಾಗ್ನಿಮಿತ್ರ’

Chandrahas

ಭವೀಶ್ ಎಂ ಶೆಟ್ಟಿ ಗೆ 90 .60 ಅಂಕ .

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಪ್ರೇರಣಾ ಸುನಿಲ್ ನಾಯ್ಕ ಶೇ: 82%

Mumbai News Desk

ವಿವಶ…

Mumbai News Desk

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk