
ಮಂಗಳೂರಿನ ಡಿ. 31: ಪ್ರದೀಪ್ ಕುಮಾರ್ ರೈ ಅವರಿಗೆ ಸನ್ಮಾನ ಮಂಗಳೂರು: ಸುಳ್ಯ ಬಂಟರ ಯಾನೆ ನಾಡವರ ಸಂಘದಿಂದ ಡಿ. 31ರಂದು ಸಂಘದ ಬಂಟರ ಭವನದಲ್ಲಿ ಬಂಟ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಬಂಟರ ವಾಹಿನಿ ಸುದ್ದಿ ಮಾಸಪತ್ರಿಕೆಯ ಸಂಪಾದಕರಾದ. ಪತ್ರಕರ್ತ ಪ್ರದೀಪ್ ಕುಮಾರ್ ರೈ ಐಕಳಬಾವ ಅವರಿಗೆ ಸನ್ಮಾನ ನಡೆಯಲಿದೆ. ಪತ್ರಿಕಾರಂಗದಲ್ಲಿ ಅವರು ಮಾಡುತ್ತಿರುವ ಸಾಧನೆ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ. ಇವರ ಜತೆಗೆ ಇನ್ನೂ ಹಲವಾರು ಮಂದಿಗೆ ಸನ್ಮಾನ ನಡೆಯಲಿದೆ. ಅಂದು ಇಡೀ ದಿನ ಕಾರ್ಯಕ್ರಮ ನಡೆಯಲಿದೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್ ಕುಮಾರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಮಂಗಳೂರಿನ ಹಿರಿಯ ಉದ್ಯಮಿ ಡಾ। ಎ. ಸದಾನಂದ ಶೆಟ್ಟಿ, ಶಾಸಕರಾದ ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ. ರಮಾನಾಥ ರೈ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಮುರಳೀಧರ ಹೆಗ್ಡೆ, ಗೃಹ ನಿರ್ಮಾಣ ಸಹಕಾರಿ ಸಂಘ ಬೆಂಗಳೂರು ಇದರ ಅಧ್ಯಕ್ಷ ಗುರುಪ್ರಸಾದ್ ರೈ ಮೊರಂಗಲ್ಲು, ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ, ಎಣ್ಣೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಅದಿ ಬೈದೇರುಗಳ ಗರಡಿಯ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ವಿದ್ಮಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸೀತಾರಾಮ ರೈ ಸವಣೂರು, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಮುಂತಾದವರು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿರುವರು.