
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಗೊ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.ಮಾತುಕತೆ ವೇಳೆ ಶೆಟ್ಟರ್ ಮನವೊಲಿಸುವಲ್ಲಿ ಅಮಿತಾ ಯಶಸ್ವಿಯಾಗಿದ್ದು ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಬಿಜೆಪಿ ಪಕ್ಷ ಮರು ಸೇರ್ಪಡೆಗೊ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಾಗಿರುವ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು ರಾಜ್ಯ ರಾಜಕೀಯ ದಲ್ಲಿ ಕುತೂಹಲ ಮೂಡಿಸಿದೆ.
ಆಗಸ್ಟ್ ತಿಂಗಳಿನಲ್ಲಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ನ್ಯೂಸ್ ಪ್ರತಿನಿಧಿ ಜಗಧೀಶ್ ಶೆಟ್ಟರ ಬಳಿ ಬಿಜೆಪಿ ಮರು ಸೇರ್ಪಡೆ ವಿಷಯ ಎತ್ತಿದಾಗ, ಶೆಟ್ಟರ್ ಕಡ ಖಂಡಿತವಾಗಿ ನಿರಾಕರಿಸಿದ್ದರು, ಜಗಧೀಶ್ ಶೆಟ್ಟರ್ ಅವರ ಇಂದಿನ ನಡೆ ರಾಜಕೀಯದಲ್ಲಿ ಯುವುದೂ ಅಸಾಧ್ಯವಲ್ಲ ಎಂದು ತೋರಿಸಿದೆ.