
ಮುಂಬಯಿ. ಜ,26. ಕಳೆದ ಹದಿನಾಲ್ಕು ವರ್ಷಗಳಿಂದ ಭಕ್ತರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಗಣೇರ್ ಪುರಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ನಿತ್ಯಾನಂದ ಸೇವಾ ಸಂಸ್ಥೆಯು 15 ನೇ ವಾರ್ಷಿಕ ದಿನಾಚರಣೆಯ ಅಂಗವಾಗಿ ಪಾದಯಾತ್ರೆಯನ್ನು ಫೆಬ್ರುವರಿ 3ರಂದು ಹಮ್ಮಿಕೊಂಡಿದೆ. ಅಂದು ಸಾಯಂಕಾಲ 6 ಗಂಟೆಯಿಂದ ಮೀರಾಭಾಯಂದರ್ ರಸ್ತೆಯಲ್ಲಿರುವ ಶ್ರೀ ಗಣೇಶ್ ಜೈ ಅಂಬಿ ಮಾತಾ ಮಂದಿರದಿಂದ(ಶುಭಂ ಹೋಟೇಲ್ ಸಮೀಪದ) ಧಾರ್ಮಿಕ ವಿಧಿವಿಧಾನ ,ಭಜನೆ ಹಾಗೂ ಮಂಗಳಾರತಿಯೊಂದಿಗೆ ‘ ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ ‘(ಶ್ರೀ ಕ್ಷೇತ್ರ ಗಣೇಶ್ ಪುರಿಗೆ) ಪಾದಯಾತ್ರೆ ಹೊರಡಲಿದೆ. ಈ ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೇವಿನ ಕೊಪ್ಪ ಶ್ರೀ ವಿಜಯಾನಂದ ಸ್ವಾಮೀಜಿ ಹಾಗೂ ಸಾಣೂರು ಸಾಂತಿಂಜ ಜನಾರ್ದನ ಭಟ್ ಉಪಸ್ಥಿತರಿದ್ದು ಆಶೀರ್ವದಿಸಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಾದಯಾತ್ರೆಯಲ್ಲಿ ಭಾಗವಹಿಸುವ ಭಕ್ತಾದಿಗಳು ಜನವರಿ 31ರ ಒಳಗೆಮೊಬೈಲ್ ಕ್ರಮಾಂಕ 9869703998, 9833850224, 9588111177, 9702368777 ಅಥವಾ 8369544002 ರಲ್ಲಿ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ವಿನಂತಿ.ಹಿರಿಯ ನಾಗರಿಕರಿಗೆ ವಾಹನದ ವ್ಯವಸ್ಥೆ ಮಾಡಲಾಗುವುದು.ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತರು ಭಾಗವಹಿಸಬೇಕಾಗಿ ಸಂಸ್ಥೆಯ ಸಂಚಾಲಕರು ಆನಂದ್ ಎನ್ ಶೆಟ್ಟಿ, ಅದ್ಯಕ್ಷ ಗೋಪಾಲಕೃಷ್ಣ ಜಿ.ಗಾಣಿಗ, ಗೌರವಾಧ್ಯಕ್ಷ ಮಹಾಬಲ ಸಮಾನಿ, ಉಪಾಧ್ಯಕ್ಷೆ ವಸಂತಿ ಶೆಟ್ಟಿ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ದೇರಳಕಟ್ಟೆ ,ಗೌ. ಕಾರ್ಯದರ್ಶಿ ಸೀತಾರಾಮ ಸಿ. ಶೆಟ್ಟಿ, ಕೋಶಾಧಿಕಾರಿ ಶೈಲೇಶ್ ಶೆಟ್ಟಿ , ಜೊತೆ ಕಾರ್ಯದರ್ಶಿ ಉಮೇಶ್ ಶೆಟ್ಟಿ, ಜೊತೆ ಕೋಶಾಧಿಕಾರಿ ಮಲ್ಲಿಕಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ ಕಾಪು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಬಿ ಶೆಟ್ಟಿ, ಕಾರ್ಯದರ್ಶಿ ಗೀತಾ ಸಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಎಸ್.ಆರ್. ಶೆಟ್ಟಿ ಮುಖ್ಯ ಸಲಹೆಗಾರ ಗುಣಪಾಲ್ ಉಡುಪಿ, ಸಹೆಗಾರರಾದ ನಾರಾಯಣಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ಭಜನಾ ಕಮಿಟಿ ಕಾರ್ಯಾಧ್ಯಕ್ಷೆ ಲತಾ ಪುತ್ರನ್ ವಿನಂತಿಸಿಕೊಂಡಿದ್ದಾರೆ