23.5 C
Karnataka
April 4, 2025
ಸುದ್ದಿ

ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ   ಸಮ್ಮಾನ 



—————————

ಮಂಗಳೂರು: ಸುವರ್ಣ ಪ್ರತಿಷ್ಠಾನ ಕರ್ನಿರೆ ವತಿಯಿಂದ 11ನೇ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ನರವಿನೊಂದಿಗೆ ಯಕ್ಷ ಕಲಾರಾಧನೆ ಮತ್ತು ಹಿರಿಯ ಕಲಾವಿದರ ಸನ್ಮಾನ ಕಾರ್ಯಕ್ರಮ ಫೆಬ್ರವರಿ 25ರಂದು ಜರಗಿತು. ಕರ್ನಿರೆ ಜಾರಂದಾಯ ದೈವದ ಗಡುವಾಡು ಬಳಿ ಕೊಪ್ಪಳ ತೋಟದಲ್ಲಿ ದುಬೈ ನಿವಾಸಿ – ಹವ್ಯಾಸಿ ಯಕ್ಷಗಾನ ವೇಷಧಾರಿ ಪ್ರಭಾಕರ ಡಿ. ಸುವರ್ಣ ಮತ್ತು ಕುಟುಂಬಿಕರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.

ಕಲಾಸಾಧಕರ ಸಮ್ಮಾನ ಯಕ್ಷಗಾನ ಕ್ಷೇತ್ರದಲ್ಲಿ ತಾಳಮದ್ದಳೆ ಅರ್ಥಧಾರಿಗಳಾಗಿ, ವೇಷಧಾರಿಗಳಾಗಿ ಮತ್ತು ಸಂಘಟಕರಾಗಿ ಪ್ರಸಿದ್ಧರಾದ ಎಂಟು ಮಂದಿ ಸಾಧಕ ಕಲಾವಿದರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯಕ್ಷಗಾನ ವಿದ್ವಾಂಸರಾದ ಡಾ.ಎಂ. ಪ್ರಭಾಕರ ಜೋಶಿ ಮತ್ತು ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಅರ್ಥಧಾರಿ, ಸಂಘಟಕರಾದ ಉಜಿರೆ ಅಶೋಕ ಭಟ್, ವೇಷಧಾರಿಗಳಾದ ಸರಪಾಡಿ ಅಶೋಕ ಶೆಟ್ಟಿ, ಡಿ‌ಮನೋಹರ ಕುಮಾರ್, ಶಶಿಕಾಂತ ಶೆಟ್ಟಿ ಕಾರ್ಕಳ ಹಾಗೂ ಯಕ್ಷಗಾನ ಮತ್ತು ನೃತ್ಯ ಕಲಾವಿದೆ ಸುಮಂಗಲಾ ರತ್ನಾಕರ್ ಅವರನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಸನ್ಮಾನಿಸಿದರು.

ಪೋಷಕರಿಗೆ ಗೌರವ:

        ಸಮಾರಂಭದಲ್ಲಿ ಪ್ರತಿಷ್ಠಾನದ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ ನಿಧಿಯನ್ನು ವಿತರಿಸಲಾಯಿತು. ಅಲ್ಲದೆ ಯಕ್ಷಗಾನ ಪೋಷಕರಾದ ಮುಂಬೈ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಸಂಘಟಕ ಪದ್ಮನಾಭ ಕಟೀಲು ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಸಂಘಟಕರಾದ ಗಿರೀಶ್ ಸುವರ್ಣ ದಂಪತಿಯನ್ನು ಸಭೆಯಲ್ಲಿ ಗೌರವಿಸಲಾಯಿತು. ಸನ್ಮಾನಿತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

      ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಪ್ರಭಾಕರ ಡಿ. ಸುವರ್ಣ ಸ್ವಾಗತಿಸಿದರು. ಗೌರವಾಧ್ಯಕ್ಷ ಭುಜಂಗ ಡಿ. ಸುವರ್ಣ ಮತ್ತು ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಜನಾರ್ದನ ಅಮ್ಮುಂಜೆ ನಿರೂಪಿಸಿ ವಂದಿಸಿದರು.

   ‌ಬಳಿಕ ತೆಂಕುತಿಟ್ಟಿನ ವಿವಿಧ ಮೇಳಗಳ ಹೆಸರಾಂತ ಕಲಾವಿದರು ಮತ್ತು ಮಹಿಳಾ ಕಲಾವಿದೆಯರಿಂದ ‘ಶ್ರೀಮತಿ ಪರಿಣಯ – ಸಮಗ್ರ ಭೀಷ್ಮ’ ಯಕ್ಷಗಾನ ಬಯಲಾಟ ಜರಗಿತು.

Related posts

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಮತ ಸೌಹರ್ದತೆಗೆ ಸಾಕ್ಷಿಯಾದ ಬಲ್ಲಂಗುಡೇಲು ಶ್ರೀ ಪಾಡಂಗರೆ ಭಗವತೀ ಕ್ಷೇತ್ರ ಸಮಿತಿ

Mumbai News Desk

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk