
ಮುಂಬಯಿ : ಭಾರತೀಯ ಜನತಾ ಪಕ್ಷದ ಪಿತಾಮಹ ಎಂದೇ ಕರೆಯಲ್ಪಡುವ ಹಿರಿಯ ರಾಜಕೀಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಈ ಸಲದ ಭಾರತರತ್ನ ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು ಇದು ಸರಕಾರದ ಸರಿಯಾದ ನಿರ್ಧಾರವೆಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯ ಸಂಸ್ಥಾಪಕನಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ತಿಳಿಸಿದ್ದಾರೆ.
ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಬಹಳಷ್ಟು ಬಾರಿ ಲಾಲ್ ಕೃಷ್ಣ ಆಡ್ವಾಣಿಯವರು ರೊಂದಿಗೆ ಕಾರ್ಯಕ್ರಮದಗಳಲ್ಲಿ ಪಾಲ್ಗೊಂಡಿದ್ದಾರೆ ಅವರ ವಿಚಾರ ಗಳು.ಚಿಂತನೆಗಳು. ದೇಶಕ್ಕೆ ನೀಡಿದ ಕೊಡುಗೆಗಳು ವಿಸ್ಮರಣೀಯವಾಗಿದೆ, ಪರಿಸರ ಪ್ರೇಮಿಯಾಗಿರುವ ಅವರು.
ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಮಾನ್ಯ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬಗ್ಗೆ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.