24.7 C
Karnataka
April 3, 2025
ಕರಾವಳಿ

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ



ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ದೇಗುಲ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಇದಕ್ಕಾಗಿ ಮೊಗವೀರ ಸಂಘಟನೆಗಳಾದ ಮೊಗವೀರ ಮಹಾಸಭಾ ದ.ಕ, ಮೊಗವೀರ ಮಹಾಜನ ಸಂಘ(ರಿ.) ಮತ್ತು ಕಾಪು ನಾಲ್ಕು ಪಟ್ಣ ಮೊಗವೀರ ಸಭಾ ಹಾಗೂ ಮಹಿಳಾ ಮಂಡಳಿ ಇವರ ನೇತೃತ್ವದಲ್ಲಿ ಫೆಬ್ರವರಿ 8 ರ ಗುರುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಅರ್ಚಕರಾದ ಜನಾರ್ದನ ತಂತ್ರಿ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಮೊಗವೀರ ಸಮುದಾಯಕ್ಕೆ ಅಪಾರ ಮತ್ಸ್ಯ ಸಂಪತ್ತು ದೊರಕುವಂತಾಗಲಿ ಮತ್ತು ಅಮ್ಮನ ದಯೆಯಿಂದ ಅತೀ ಹೆಚ್ಚು ಮೊಗವೀರ ಬಂಧುಗಳು “ಕಾಪುವಿನ ಅಮ್ಮನ ಮಕ್ಕಳು” ತಂಡಕ್ಕೆ ಸೇರ್ಪಡೆಯಾಗಲಿ ಎಂದು ಪ್ರಾರ್ಥಿಸಿದರು.

ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಯಾಗಲು ಮನವಿ ಪತ್ರವನ್ನು ಕಾಪು ಕ್ಷೇತ್ರದ ಶಾಸಕರು, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಅವರು ದ. ಕ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

ನಮ್ಮ ಗೌರವಾಧ್ಯಕ್ಷರಾದ ನಾಡೋಜ ಡಾ. ಜಿ. ಶಂಕರ್ ಮತ್ತು ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರ ಮುಂದಾಳತ್ವದಲ್ಲಿ ಉಪ್ಪಳದಿಂದ ಶಿರೂರು ಭಾಗದವರೆಗಿನ ಎಲ್ಲಾ ಮೊಗವೀರ ಸಮಾಜ ಬಾಂಧವರಿಗೆ ಈ ಮನವಿ ಪತ್ರವನ್ನು ತಲುಪಿಸಲಿದ್ದೇವೆ ಮತ್ತು ಅತೀ ಹೆಚ್ಚಿನ ಆರ್ಥಿಕ ಸಹಕಾರವನ್ನು ನಮ್ಮ ಸಮಾಜದಿಂದ ನೀಡಲಿದ್ದೇವೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಸುಧಾಕರ ಕುಂದರ್ ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಜೇಂದ್ರ ಹಿರಿಯಡಕ, ದಿನೇಶ್ ಏರ್ಮಾಳು, ಕಾಪು ನಾಲ್ಕು ಪಟ್ನ ಅಧ್ಯಕ್ಷರಾದ ಮನೋಜ್ ಕಾಂಚನ್, ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಮಾಜಿ ಆಡಳಿತ ಮುಕ್ತೆಸರರಾದ ಮೋಹನ್ ಬಂಗೇರ, ದೇವಳದ ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಚಂದ್ರಶೇಖರ್ ಅಮೀನ್, ಬಾಬು ಮಲ್ಲಾರ್, ಶೈಲಜಾ ಪುರುಷೋತ್ತಮ್, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ್ ಆಚಾರ್ಯ, ಶ್ರೀಧರ ಕಾಂಚನ್, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಕಾಪು ಮೊಗವೀರ ಮಹಾಸಭಾ ಅಧ್ಯಕ್ಷರಾದ ಕುಶ ಸಾಲ್ಯಾನ್, ಶೀಲರಾಜ್, ಜಗದೀಶ್ ಮೆಂಡನ್, ಆಶಾ ಎಂ. ಕುಂದರ್, ಶಕುಂತಲಾ ಕೋಟ್ಯಾನ್, ಉಷಾ, ಕವಿತಾ, ಮಮತಾ, ಗೀತಾ ರಾಜ್, ಕೃಷ್ಣ ಕರ್ಕೇರ, ಭಾಸ್ಕರ ಅಮೀನ್, ಸುನೀತಾ, ಯಶವಂತಿ, ಸುನಿಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas