
————————-
ಬಂಟ್ವಾಳ : ‘ಯಕ್ಷಗಾನ ಬಯಲಾಟವನ್ನು ದೇವರ ಸೇವಾ ರೂಪವಾಗಿ ಆಡಿಸುವ ಸಂಪ್ರದಾಯ ಕರಾವಳಿಯಲ್ಲಿ ಬೆಳೆದು ಬಂದಿದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನ ಸಾಧ್ಯ. ಅಲ್ಲದೆ ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ಸಮಾಜದ ಶ್ರೇಷ್ಠ ಕಾರ್ಯ ಎಂದು ಮುಂಬಯಿ ಬಂಟರ ಸಂಘದ ಅಧ್ಯಕ್ಷ’ ಪ್ರವೀಣ ಭೋಜ ಶೆಟ್ಟಿ ನುಡಿದರು.
ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಸುವರ್ಣ ಸಂಭ್ರಮ ಪ್ರಯುಕ್ತ ಫೆ.15ರಂದು ನಡೆದ ಕಟೀಲು ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ‘
ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಮತ್ತು ಸಾಲಿಗ್ರಾಮ ಸೇರಿದಂತೆ ಬಹು ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರಿಗೆ ಸುವರ್ಣೋತ್ಸವ ಗೌರವ ಪ್ರಶಸ್ತಿ ನೀಡಲಾಯಿತು. ಅಲ್ಲದೆ ಕಟೀಲು ಮೇಳದ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಅವರಿಗೆ 2024 ನೇ ಸಾಲಿನ ‘ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಪ್ರಶಸ್ತಿ’ ಯನ್ನು ಪ್ರದಾನ ಮಾಡಲಾಯಿತು. ಯಕ್ಷಗಾನ ವಿದ್ವಾಂಸ ಡಾ. ಎಂ.ಪ್ರಭಾಕರ ಜೋಶಿ ಶುಭಾಶಂಸನೆ ಮಾಡಿದರು.
ಕರ್ನಾಟಕ ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ , ಮಾಜಿ ಸಚಿವ ಬಿ.ರಮಾನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದರು. ಪಳ್ಳಿ ಕಿಶನ್ ಹೆಗ್ಡೆ ಮತ್ತು ಅಮ್ಮುಂಜೆ ಮೋಹನ್ ಕುಮಾರ್ ಸನ್ಮಾನಿತರ ಪರವಾಗಿ ಮಾತನಾಡಿದರು.
ಊರ ಪ್ರಮುಖರಾದ ವಾಸುದೇವ ಕಾಮತ್ ನರಿಕೊಂಬು ಪದ್ಮನಾಭ ಮಯ್ಯ ಏಲಬೆ, ಬೊಂಡಾಲ ಸೀತಾರಾಮ ಶೆಟ್ಟಿ, ಸ್ವರ್ಣಲತಾ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದ ಸಮಿತಿ ಅಧ್ಯಕ್ಷ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಅವರನ್ನು ಊರವರ ಪರವಾಗಿ ಅಭಿನಂದಿಸಲಾಯಿತು. ಶಿಲ್ಪಾ ಕಿಶನ್ ಹೆಗಡೆ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಸುವರ್ಣ ಸಂಭ್ರಮದ ಅಧ್ಯಕ್ಷ ಬಿ.ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿದರು. ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸುನಾದ್ ರಾಜ್ ಶೆಟ್ಟಿ ಬೊಂಡಾಲ ಅಂತರಗುತ್ತು,ಸತೀಶ್ ಪಕ್ಕಳ ಇರಾ ಸನ್ಮಾನ ಪತ್ರ ವಾಚಿಸಿದರು. ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ವಂದಿಸಿದರು. ಸಮಿತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ಸಂಯೋಜಿಸಿದರು.