
ಇದು ಬರೇ ಕಲ್ಲಲ್ಲ ಭಕ್ತಿ – ಭಾವದ ಸಂಕೇತ
ಆದ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿಯವರು ಫೆಬ್ರವರಿ 20ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪು ಮಾರಿಯಮ್ಮನ ದರುಶನ ಪಡೆದು, ಕಾಪು ಶಾಸಕ ಮತ್ತು ದೇವಳದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ ಅವರಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ನಂತರ ದಕ್ಷಿಣ ಭಾರತದ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ನಿರ್ಮಾಣಗೊಳ್ಳುತ್ತಿರುವ ಇಳಕಲ್ಲ್ ಕೆಂಪು ಶಿಲೆಯ ದೇಗುಲದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಭಿವೃದ್ಧಿ ಸಮಿತಿ ಹಲವಾರು ಶತಮಾನಗಳ ಕಾಲ ಉಳಿಯುವ ಕಾರ್ಯವನ್ನು ಮಾಡುತ್ತಾ ಇದ್ದೀರಿ, ಭಾರತದಲ್ಲಿ ಆದ್ಯಾತ್ಮಿಕತೆಗೆ ಒಂದು ಹೊಸ ಉತ್ಸಾಹ, ಹುರುಪು ಬಂದಿದೆ ಕೆಂಪು ಕಲ್ಲಿನಲ್ಲಿ ಇಷ್ಟು ಸುಂದರವಾಗಿ ದೇವಸ್ಥಾನ ನಿರ್ಮಾಣ ಆಗ್ತಾ ಇದೆ, ಇದು ಬರೇ ಕಲ್ಲಲ್ಲ, ಕಲ್ಲಿನೊಂದಿಗೆ ಭಕ್ತಿ – ಭಾವ ತುಂಬಿ ಮಾಡಿದ್ದೀರಿ, ಎಲ್ಲರೂ ಸೇರಿ ಹೃದಯದಿಂದ ಕೆಲಸ ಮಾಡಿದರೆ ದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ, ದಿನನಿತ್ಯ ಇಲ್ಲಿ ಚಮತ್ಕಾರಗಳು ನಡೆಯುತ್ತಲೇ ಇರುತ್ತದೆ, ಇಲ್ಲಿಗೆ ಬರುವ ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ, ಭಕ್ತರು ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ಈಗಾಗಲೇ ಕೆಲಸಗಳು ಕಾಣುತ್ತವೆ, ಇನ್ನು ಹೆಚ್ಚಿನ ಅಭಿವೃದ್ಧಿಗೊಂಡು ಕ್ಷೇತ್ರದಿಂದ ಜನರಿಗೆ ಅರೋಗ್ಯ ಮತ್ತು ಮನಸಿನಲ್ಲಿ ಉತ್ಸಾಹ ಉಂಟಾಗಲಿ ಎಂದು ಹಾರೈಸಿದರು.




ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರುಗಳಾದ ಲಾಲಾಜಿ ಆರ್. ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್ , ಮನೋಹರ ಎಸ್. ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಚಂದ್ರಶೇಖರ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ, ಬಾಬು ಮಲ್ಲಾರ್, ಗೌರವ ಸಲಹೆಗಾರರಾದ ನಿರ್ಮಲ್ ಕುಮಾರ್ ಹೆಗ್ಡೆ, ಮಾಜಿ ಸದಸ್ಯರಾದ ಶೇಖರ್ ಸಾಲ್ಯಾನ್, ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಮೋಹನ್ ಎಂ ಬಂಗೇರ, ಗುರ್ಮೆ ಹರೀಶ್ ಶೆಟ್ಟಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೋಲ್ಯ, ಕಟ್ಟಡ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ಜೀರ್ಣೋದ್ಧಾರದ ಮುಂಬೈ ಸಮಿತಿಯ ಕಾರ್ಯದರ್ಶಿ ಸದಾಶಿವ ಎ. ಕರ್ಕೇರ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್. ಮುಖ್ಯ ಸಂಚಾಲಕರಾದ ಸುನಿಲ್. ಎಸ್. ಪೂಜಾರಿ, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಶ್ರೀಧರ ಕಾಂಚನ್, ದಿವಾಕರ್ ಶೆಟ್ಟಿ ಮಲ್ಲಾರ್, ಪ್ರಭಾತ್ ಶೆಟ್ಟಿ ಮೂಳೂರು, ಉದಯ ಶೆಟ್ಟಿ ಭಾರ್ಗವ, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಶೈಲಪುತ್ರಿ ತಂಡದ ಸಂಚಾಲಕರಾದ ರಾಧಾರಮಣ ಶಾಸ್ತ್ರೀ, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ.ಶೆಟ್ಟಿ, ಸಂಚಾಲಕರುಗಳಾದ ಶಾಂತಲತಾ ಸುಬ್ರಹ್ಮಣ್ಯ ಶೆಟ್ಟಿ, ಶೋಭಾ ರಮೇಶ್ ಶೆಟ್ಟಿ, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಅನುರಾಧ ಮನೋಹರ್ ಶೆಟ್ಟಿ, ಕವಿತಾ ಶೆಟ್ಟಿ, ವನಿತಾ ಶೆಟ್ಟಿ, ಅನಿತಾ ಹೆಗ್ಡೆ, ಪ್ರತಿಭಾ ಯು. ಶೆಟ್ಟಿ, ಸುನೀತಾ ಶೆಟ್ಟಿ, ದೀಪಿಕಾ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ರೇಣುಕಾ ಜೋಗಿ, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.