
ಸುಪ್ತ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು ಸಂಸ್ಥೆಯ ಧ್ಯೇಯವಾಗಿದೆ : ಸಿಎ ಸುರೇಂದ್ರ ಕೆ. ಶೆಟ್ಟಿ
ನವಿ ಮುಂಬಯಿ, ಫೆ. 29: ಪ್ರತಿಯೊಂದು ಮಗುವಿನಲ್ಲೂ ದೈವಿ`ದತ್ತವಾದ ಸುಪ್ತ ಪ್ರತಿಭೆಗಳು ಅಡಕವಾಗಿದ್ದು, ಆ ಸುಪ್ತ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ನಿರಂತರವಾಗಿ ನಡೆದಾಗ ಮಕ್ಕಳು ಪ್ರತಿಭವಂತರಾಗಿ ಬೆಳೆಯಲು ಸಾದ್ಯವಿದೆ. ಸುಪ್ತ ಪ್ರತಿಭೆಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ನಮ್ಮ ಶ್ರೀಮಂತ ಸಂಸ್ಕೃತಿ ಹಾಗೂ ಕಲೆಗಳ ಸೆಲೆ ನಿರಂತರವಾಗಿರುವಂತೆ ನೋಡಿಕೊಂಡು ಹೋಗುವ ಮಹದಾಸೆಯನ್ನು ಬಾಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಂಸ್ಥೆ ಹೊಂದಿದೆ. ಪ್ರಸ್ತುತ ಸಾವಿರಾರು ಮಕ್ಕಳು ನಮ್ಮ ಸಂಸ್ಥೆಯಿಂದ ಶಿಕ್ಷಣವನ್ನು ಪಡೆದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ. ಶೆಟ್ಟಿ ನುಡಿದರು.




ಜ. 16 ರಂದು ಜೂಯಿ ನಗರದ ಬೊಂಬೆ ಬಂಟ್ಸ್ ಅಸೋಸಿಯೇಶನ್ ಇದರ ಬಂಟ್ಸ್ ಸೆಂಟರ್‌ನ ಶಶಿಕಲಾ ಮನಮೋಹನ ಶೆಟ್ಟಿ ಕಾಂಪ್ಲೆಕ್ಸ್ನ ಸೌಮ್ಯಲತಾ ಸದಾನಂದ ಶೆಟ್ಟಿ ಆಡಿಟೋರಿಯಂನಲ್ಲಿ ನಡೆದ ಅಸೋಸಿಯೇಶನ್‌ನ ಉನ್ನತ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಸೋಸಿಯೇಶನ್‌ನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಶಿಕ್ಷಣ ಸಂಸ್ಥೆಯ ಮೂಲಕ ಅಸೋಸಿಯೇಶನ್‌ನ ಕೀರ್ತಿ ಬಹಳಷ್ಟು ಎತ್ತರಕ್ಕೆ ಬೆಳೆದಿದೆ. ಇಲ್ಲಿಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ಉತ್ತಮ ಅಂಕಗಳನ್ನು ಪಡೆಯುತ್ತಿದ್ದಾರೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಪೂರ್ತಿಗೊಳಿಸಿದ ಬಳಿಕ ಕೂಡ ನಮ್ಮ ಸಂಸ್ಥೆಯ ಸಂಬಂಧವನ್ನು ಉಳಿಸಿ ಬೆಳೆಸಿಕೊಳ್ಳಬೇಕು. ಶಿಕ್ಷಣ ಸಮಿತಿಯ ಪದಾಽಕಾರಿಗಳು, ಸದಸ್ಯರ ಸಹಕಾರದೊಂದಿಗೆ ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿಗಳು ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ನಡೆಸುತ್ತಿದ್ದು, ಅವರನ್ನು ಈ ಸಂದರ್ಭದಲ್ಲಿಅಭಿನಂದಿಸುತ್ತಿದ್ದೇನೆ ಎಂದು ನುಡಿದು ಶುಭ ಹಾರೈಸಿದರು.
ಬೊಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ ಅವರು ಮಾತನಾಡಿ, ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ. ಗುರುಗಳು ಮತ್ತು ತಂದೆ-ತಾಯಿಯನ್ನು ಅತ್ಯಂತ ಗೌರವದಿಂದ ಕಾಣುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಸಂಸ್ಥೆಯ ಶಿಕ್ಷಣದ ಸೌಲಭ್ಯಗಳನ್ನು ಎಲ್ಲರು ಪಡೆದುಕೊಳ್ಳುವಂತೆ ವಿನಂತಿಸಿದರು.

ಅಸೋಸಿಯೇಶನ್‌ನ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಅವರು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಹನ್ಸರಾಜ್ ಜೀವನ್ಧಾಸ್ ಕಾಲೇಜ್ ಆಫ್ ಎಜುಕೇಶನ್ ಮುಂಬಯಿ ಇದರ ಪ್ರಾಂಶುಪಾಲೆ ಡಾ| ಗೀತಾ ಎಸ್. ಶೆಟ್ಟಿ ಮತ್ತು ಗೌರವ ಅತಿಥಿಯಾಗಿ ಎನಲ್ಟೆಕ್ ಲ್ಯಾಬ್ ಇದರ ಉಪಾಧ್ಯಕ್ಷ ಅಜಿತ್ ತಲ್ವಾರ್ ಅವರು ಉಪಸ್ಥಿತರಿದ್ದರು.
ಬಾಂಬೆ ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ನ್ಯಾಯವಾದಿ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಕೋಶಾಽಕಾರಿ ಸಿಎ ವಿಶ್ವನಾಥ ಶೆಟ್ಟಿ, ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕಾರ್ ಶೆಟ್ಟಿ, ಜತೆ ಕೋಶಾಽಕಾರಿ ಸಿಎ ದಿವಾಕರ ಶೆಟ್ಟಿ, ಉನ್ನತ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಸಲಹಾ ಕೌನ್ಸಿಲ್ ಇದರ ಕಾರ್ಯಾಧ್ಯಕ್ಷ ನ್ಯಾಯವಾದಿ ಅಶೋಕ್ ಡಿ. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಶ್ರೀಧರ್ ಕೆ ಶೆಟ್ಟಿ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷೀ ಎಸ್. ಶೆಟ್ಟಿ, ಪ್ರಾಂಶುಪಾಲರಾದ ಡಾ| ರಶ್ಮಿ ಚಿಂತ್ಲಾಗೆ , ಪ್ರೊ| ಪ್ರಥಮೇಶ್ ಪಾಟೀಲ್, ನೀಲೇಶ್ ಸಾವಂತ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅತಿಥಿ-ಗಣ್ಯರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬಹುಮಾನವನ್ನಿತ್ತು ಗೌರವಿಸಿದರು. ಸಮಾರಂಭದಲ್ಲಿ ಸಂಸ್ಥೆಯ ಪದಾಽಕಾರಿಗಳು, ಕರ‍್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಪದಾಽಕಾರಿಗಳು, ಶಿಕ್ಷಣ ಪ್ರೇಮಿಗಳು, ದಾನಿಗಳು, ವಿದ್ಯಾರ್ಥಿಗಳು, ಶಿಕ್ಷಕವೃಂದದವರು, ಶಿಕ್ಷಕೇತ್ರ ಸಿಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕರ‍್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
………………….
ಪ್ರತಿಯೊಬ್ಬ ಯಶಸ್ವಿ ವ್ಯಕ್ತಿಯ ಹಿಂದೆ ಬಹಳಷ್ಟು ಪರಿಶ್ರಮವಿದೆ. ವಿದ್ಯಾರ್ಥಿಗಳು ಸೋಲನ್ನು ಗೆಲುವಾಗಿ ಸ್ವೀಕರಿಸಬೇಕು. ಸೋಲು ಸಾಧನೆಗೆ ಕೊನೆಯಾಗದಿರಲಿ. ಜೀವನದಲ್ಲಿ ಸಾಧನೆ ಮುಂದುವರಿಯುತ್ತಿರಲಿ, ಖಂಡಿತವಾಗಿ ಯಶಸ್ಸು ಸಿಗುತ್ತದೆ. ಬಾಂಬೆ ಬಂಟ್ಸ್ ಅಸೋಸಿಯೇಶನ್ ಶಿಕ್ಷಣ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಪ್ರತಿಭೇಗಳಿಗೆ ಉತ್ತಮವಾದ ವೇದಿಕೆಯನ್ನು ನೀಡಿದೆ. ಬದುಕಲ್ಲಿ ಉತ್ತಮವಾದ ಬದಲಾವಣೆಯನ್ನು ತರಲು ವಿದ್ಯಾರ್ಥಿಗಳು ಮುಂದಾಗಬೇಕು. ಜೀವನದಲ್ಲಿ ಸಮಸ್ಯೆಗಳಿಗೆ ಎದೆಗುಂದದೆ ಯಶಸ್ಸಿನತ್ತ ಮುಂದುವರಿಯಬೇಕು – ಪ್ರೊ| ಡಾ| ಗೀತಾ ಶೆಟ್ಟಿ (ಪ್ರಾಂಶುಪಾಲೆ : ಹನ್ಸರಾಜ್ ಜೀವನ್ಧಾಸ್ ಕಾಲೇಜ್ ಆಫ್ ಎಜುಕೇಶನ್ ಮುಂಬಯಿ).
ಶಿಕ್ಷಣ ಮನುಷ್ಯನ ಪ್ರಗತಿಗೆ ಆಧಾರವಾಗಿದೆ. ಇದು ಸಮಾಜದ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಒಂದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಶೈಕ್ಷಣಿಕ ಸೇವೆಯನ್ನು ಕಂಡಾಗ ಸಂತೋಷವಾಗುತ್ತಿದೆ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದು ಆದರ್ಶ ಪ್ರಜೆಗಳಾಗಿ ಬಾಳಲು ಮುಂದಾಗಬೇಕು – ಅಜಿತ್ ತಲ್ವಾರ್ ( ಉಪಾಧ್ಯಕ್ಷರು : ಎನಲ್ಟೆಕ್ ಲ್ಯಾಬ್ ಮುಂಬಯಿ).