
ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ ಮಹಿಳಾ ಸಮಿತಿಯ ಸಂಯೋಜನೆಯಲ್ಲಿ ಮಾರ್ಚ್ 17 ರವಿವಾರದಂದು ಅಪರಾಹ್ನ 3-30 ರಿಂದ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವು ಥಾಣೆ ಪಶ್ಚಿಮ ನೌಪಾಡದ ಗಾಂವ್ದೇವಿ ಮೈದಾನ ಸಮೀಪದ ಮುಕುಂದ್ ನಾಥು ಪಥ್, 9 ಮಾನಸಿ ಕಟ್ಟಡದ ಪ್ರಥಮ ಮಹಡಿಯಲ್ಲಿರುವ ಸಂಘದ ಕಿರು ಸಭಾಗೃಹದಲ್ಲಿ ಜರಗಲಿದ್ದು ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ, ಸಮಾಜಸೇವಕಿ ನಗರದ ಖ್ಯಾತ ನ್ಯಾಯವಾದಿ ಶಕುಂತಲಾ ಎ. ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಉದ್ಯಮಿ ಸಮಾಜ ಸೇವಕಿ ಯಶೋದಾ ಎನ್. ಪೂಜಾರಿ ಆಗಮಿಸಲಿದ್ದಾರೆ. ಸಮುದಾಯದ ಗಣ್ಯರು ಹಾಗೂ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಈ ಸಮಾರಂಭ ಜರಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಮನೋರಂಜನೆಯ ಅಂಗವಾಗಿ ಆಡಳಿತ ಮಂಡಳಿ ಮತ್ತು ವಿವಿಧ ಉಪಸಮಿತಿಗಳು ಸಂಸ್ಕೃತಿಯನ್ನು ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮ ಸಾದರಪಡಿಸಲಿರುವುದರಿಂದ ಸಂಘದ ಸದಸ್ಯರೊಂದಿಗೆ ಕುಂದಾಪುರ ಬಿಲ್ಲವ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ, ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಉಪಾಧ್ಯಕ್ಷರುಗಳಾದ ನರಸಿಂಹ ಎಮ್. ಬಿಲ್ಲವ, ಆನಂದ ಕೆ. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಸುಶೀಲಾ ಆರ್. ಪೂಜಾರಿ, ಹರೀಶ್ ಎನ್. ಪೂಜಾರಿ ಜೊತೆ ಕೋಶಾಧಿಕಾರಿ ಗಳಾದ ರಮೇಶ ಜಿ. ಬಿಲ್ಲವ, ರತ್ನಾಕರ ಎಸ್.ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷೆ ದೀಪಾ ವೈ. ಪೂಜಾರಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ ವಿ. ಪೂಜಾರಿ, ಮಹಿಳಾ ಸಮಿತಿಯ ಗೌರವ ಕಾರ್ಯಾಧ್ಯಕ್ಷೆ ಸಂತೋಷಿ ಎಸ್. ಪೂಜಾರಿ, ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಉಪ ಕಾರ್ಯಾಧ್ಯಕ್ಷೆಯರಾದ ಯಶೋದಾ ಎಸ್. ಪೂಜಾರಿ, ರೇಖಾ ಎನ್. ಬಿಲ್ಲವ, ಕಾರ್ಯದರ್ಶಿ ಗಿರಿಜಾ ಬಿ. ಪೂಜಾರಿ, ಜೊತೆ ಕಾರ್ಯದರ್ಶಿಗಳಾದ ಶಾರದ ಬಿ. ಪೂಜಾರಿ, ಕುಸುಮ ಎ. ಪೂಜಾರಿ ಹಾಗೂ ಆಡಳಿತ ಮಂಡಳಿ, ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.
ಕಾರ್ಯಕ್ರಮವು ನಿಗದಿತ ಸಮಯಕ್ಕೆ ಆರಂಭವಾಗಲಿರುವುದರಿಂದ ಸಂಘದ ಸದಸ್ಯರು ಸಕಾಲದಲ್ಲಿ ಆಗಮಿಸಿ ಸಭಾಂಗಣದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ವಿನಂತಿಸುವುದರೊಂದಿಗೆ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಘದ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಪದಾಧಿಕಾರಿಗಳನ್ನು ಅಥವಾ ಸದಸ್ಯರನ್ನು (9867811733/9167308868/9619888160) ಸಂಪರ್ಕಿಸುವಂತೆ ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ಮತ್ತು ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ತಿಳಿಸಿದ್ದಾರೆ.