32 C
Mumbai
March 7, 2026
Mumbai News Kannada
ಸುದ್ದಿ

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.





ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಎಲ್ಲರ ಕುತೂಹಲ ಕೆರಳಿಸಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ಕಣಕಳಿಯಲಿದ್ದಾರೆ. ಅ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಪ್ರತಿನಿಧಿಸಿದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಲಭಿಸಿದೆ.
ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಯಾದಿ ಈ ರೀತಿ ಇದೆ :

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ ಬಾಗಲಕೋಟೆ- ಪಿ.ಸಿ.ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋ‌
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ



Related posts

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk