
ಕೇಂದ್ರ ಚುನಾವಣಾ ಆಯೋಗ ಇಡೀ ದೇಶವೇ ಕುತೂಹಲದಿಂದ ಕಾಯುತಿದ್ದ 2024ರ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಏಪ್ರಿಲ್ 19ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಇಂದು ದೆಹಲಿಯಲ್ಲಿ ನೂತನವಾಗಿ ಆಯ್ಕೆಯಾದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಪತ್ರಿಕಾ ಘೋಷ್ಟಿ ಮೂಲಕ ಈ ವಿಷಯ ತಿಳಿಸಿದರು.
ಏಪ್ರಿಲ್ 19ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ, ಏಪ್ರಿಲ್ 26ಕ್ಕೆ 89 ಕ್ಷೇತ್ರ, ಮೇ 7ರಂದು 3ನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಲ್ಲಿ, ಮೇ 13ಕ್ಕೆ 96, ಮೇ 20ರಂದು 49, ಮೇ 25ಕ್ಕೆ 56, ಜೂನ್ 1ರಂದು 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 4 ಕ್ಕೆ ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 7ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 26ರಂದು ಮತದಾನ ಜರಗಲಿದೆ.