
ಕಾಪುವಿನ ಹಳೇ ಶ್ರೀ ಮಾರಿಗುಡಿ ದೇವಸ್ಥಾನ, ಹೊಸ ಶ್ರೀ ಮಾರಿಗುಡಿ ದೇವಸ್ಥಾನ ಹಾಗೂ ಮೂರನೇ ಶ್ರೀ ಮಾರಿಗುಡಿ ದೇವಸ್ಥಾನದಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ ‘ ಮಾರ್ಚ್ 26 ಮತ್ತು 27ರಂದು ನಡೆಯಲಿದೆ.
ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಮಾ.26ರಂದು ರಾತ್ರಿ ಹಳೇ ಮಾರಿಗುಡಿಗೆ ವೆಂಕಟರಮಣ ದೇವಸ್ಥಾನದಿಂದ, ಹೊಸ ಮಾರಿಗುಡಿ, ಮತ್ತು 3ನೇ ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಿಂದ ಶ್ರೀ ಮಾರಿಯಮ್ಮ ದೇವಿಯ ಬಿಂಬವನ್ನು ಮೆರವಣಿಗೆ ಮೂಲಕ ತಂದು ಗದ್ದುಗೆಯೇರಿಸಿ ಮಾರಿಪೂಜೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತದೆ.
ಮಾರ್ಚ್ 27ಕ್ಕೆ ಸಂಜೆ ದೇವಿಯ ದರ್ಶನ ಸೇವೆ ನಡೆದ ಬಳಿಕ ದೇವಿಯ ಬಿಂಬ ವಿಸರ್ಜಿಸಲಾಗುತ್ತದೆ.
ಇತಿಹಾಸ ಪ್ರಸಿದ್ಧ ಕಾಪುವಿನ 3 ಮಾರಿಗುಡಿಗಳಲ್ಲಿ ನಡೆಯುವ ಸುಗ್ಗಿ ಮಾರಿಪೂಜೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಹಾಗೂ ಮುಂಬೈಯಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.