
ಸುರತ್ಕಲ್, ಮಾ.20. ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಸದಸ್ಯರಾಗಿ ಸುಬ್ರಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೋರಾಡಿಸಿದ ಆದೇಶದಲ್ಲಿ ಸರಕಾರದ ಅಧೀನ ಕಾರ್ಯದರ್ಶಿಯವರು ಸುಬ್ರಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಬ್ರಹ್ಮಣ್ಯ ಪ್ರಸಾದ್ ಅವರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ, ಅಖಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಹ ಸಂಚಾಲಕ ಪ್ರಸ್ತುತ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿರುತ್ತಾರೆ.