
ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಅತ್ಯಂತ ಪ್ರಸಿದ್ಧಿ ಪಡೆದ ಹೋಟೆಲ್ “ಉಡುಪಿ To ಮುಂಬೈ ಗ್ರೂಪ್ ಆಫ್ ಹೊಟೇಲ್ಸ್, ಮುಂಬೈ” ಇದರ ಮಾಲಕರಾದ ಶಿವಚಂದ್ರ ಶೆಟ್ಟಿ ಮತ್ತು ತ್ರಿವೇಣಿ ಶಿವಚಂದ್ರ ಶೆಟ್ಟಿಯವ ರು ಆಯೋಜಿಸಿದ ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ದಂಪತಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿ ಹೋಳಿ ಹಬ್ಬದ ಶುಭಾಶಯ ನೀಡಿದರು.
ಈ ಸಂದರ್ಭದಲ್ಲಿ ಶಿವಚಂದ್ರ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ಹಲವಾರು ಜನಪರ ಕಾರ್ಯಕ್ರಮಗಳ ಕುರಿತು ಶ್ಲಾಘಿಗಿಸಿ ಮುಂದಿನ ಒಕ್ಕೂಟದ ಯೋಜನೆಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ,
ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ ಹಾಗೂ ಜೀವನ್ ಶೆಟ್ಟಿ ದಂಪತಿಗಳು ಉಪಸ್ಥಿತರಿದ್ದರು.