32 C
Mumbai
March 7, 2026
Mumbai News Kannada
ಕರಾವಳಿ

ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ





ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್  ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. 

ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯೆಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರ್ವಹಿಸಿದರು.  ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.



Related posts

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk