
ಮುಂಬಯಿ, : ಗೋರೆಗಾಂವ್ ಕರ್ನಾಟಕ ಸಂಘ ಹಾಗೂ ಯುವ ವಿಭಾಗದ ಜಂಟಿ ಆಶ್ರಯದಲ್ಲಿ ತುಳು ಪರ್ಬ ಮತ್ತು ದತ್ತಿನಿಧಿ ಕಾರ್ಯಕ್ರಮವು ಎ. 14ರಂದು ಅಪರಾಹ್ನ 5ರಿಂದ ಗೋರೆಗಾಂವ್ ಪಶ್ಚಿಮದ ಆರೇ ರೋಡ್‌ನಲ್ಲಿರುವ ಕೇಶವ ಗೋರೆ ಸ್ಮಾರಕ ಟ್ರಸ್ಟಿನ ಎರಡನೇ ಮಹಡಿಯ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ದಿ| ಜಯಕರ ಡಿ. ಪೂಜಾರಿ ವೇದಿಕೆಯಲ್ಲಿ ನಿಟ್ಟೆ ಸುಧಾಕರ ಶೆಟ್ಟಿ ಹಾಗೂ ಎಸ್. ಜೆ. ಶೆಟ್ಟಿ ಇವರ ದತ್ತಿನಿಧಿ ಕಾರ್ಯಕ್ರಮವು ನಡೆಯಲಿದೆ. ಮುಖ್ಯ ಅತಿಥಿಯಾಗಿ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಹಾಗೂ ಕುಲಾಲ ಸಂಘ ಮುಂಬಯಿಯ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿ ಯ ಉಪಕಾರ್ಯಧ್ಯಕ್ಷೆ ರತ್ನಾ ಡಿ. ಕುಲಾಲ್ ಆಗಮಿಸಲಿರುವರು.
ಸಂಘದ ಸದಸ್ಯರಿಂದ, ಯುವ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್, ಉಪಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸರಿತಾ ಸುರೇಶ್ ನಾಯಕ್, ಗೌರವ ಕೋಶಾಧಿಕಾರಿ ಎಂ. ಆನಂದಶೆಟ್ಟಿ ಯುವ ವಿಭಾಗದ ಕಾರ್ಯಾಧ್ಯಕ್ಷೆ ಶಿವಾನಿ ಎಚ್. ಆಚಾರ್ಯ ಹಾಗೂ ಸದಸ್ಯರು, ಸಂಘದ ಪಾರುಪತ್ಯಗಾರರು, ಕಾರ್ಯಕಾರಿ ಸಮಿತಿ ಹಾಗೂ ಉಪಸಮಿತಿಗಳ ಎಲ್ಲಾ ಸದಸ್ಯರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.