
ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವಾರ್ಷಿಕ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..
ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರಧಾನ ಹೋಮ ಪಂಚವಿ0ಶತಿ ಕಲಶ ಅಭಿಷೇಕ ಪ್ರಸನ್ನ ಪೂಜೆ ಶ್ರೀ ಲಕ್ಷ್ಮಿ ಸಹಸ್ರನಾಮ ಪಾಯಸ ಹೋಮ ಶ್ರೀ ಕುಬೇರ ಮಂತ್ರ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಮಹಾಪೂಜೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ