
ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು
ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.
ಮೃತರು ಪತ್ನಿ ಸುಮಾ ಆರ್.ಆಚಾರ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್.ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.