36.8 C
Karnataka
March 29, 2025
ಕರಾವಳಿ

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯ: ಪ್ರವೀಣ್ ಭೋಜ ಶೆಟ್ಟಿ

ಚಿತ್ರ ವರದಿ ದಿನೇಶ್ ಕುಲಾಲ್ 

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ ಮೇ 26 ರಂದು ಆದಿತ್ಯವಾರ   ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. 

 ಮಧ್ಯಾಹ್ನ ನಡೆದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ ಕಾರ್ಯಕ್ರಮದಲ್ಲಿ 

 ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, “ಯುವಜನತೆ ಯಕ್ಷಗಾನದಿಂದ ದೂರವಾಗುತ್ತಿರುವ ಈ  ಆಧುನಿಕ ಕಾಲಘಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲೂ ಯಕ್ಷಗಾನದ ವೈಭವ ಮರುಕಳಿಸುವಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯವಾದುದು. ತುಳುನಾಡಿನ ಕಲೆಯನ್ನು ಮರಳಿ ಉಳಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಯೋಜನೆ ಮತ್ತು ಯೋಚನೆ ಇದೇ ರೀತಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು

     ಕಾರ್ಯಕ್ರಮದ. ಅಧ್ಯಕ್ಷತೆಯನ್ನು ವಹಿಸಿದ  ಜಮ್ಮು ಕಾಶ್ಮೀರದ ಪ್ರಿನ್ಸಿಪಾಲ್ ಸೆಕ್ರೆಟರಿ ರಾಜೇಶ್ ಪ್ರಸಾದ್ ಮಾತನಾಡಿ, ‘ಒಂದು ಕಾಲದಲ್ಲಿ ನಮ್ಮ ಕರಾವಳಿಯ ಕಲೆ ಯಕ್ಷಗಾನವು ನಶಿಸಿಹೋಗುವ ಸ್ಥಿತಿಯಲ್ಲಿತ್ತು. ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಭಗೀರಥ ಪ್ರಯತ್ನವನ್ನು ಮಾಡುತ್ತಿದ್ದಾರೆ. 4000ಕ್ಕೂ ಹೆಚ್ಚು ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಮೂಲಕ ಕಲೆಯನ್ನು ರಾಜ್ಯಾದ್ಯಂತ ಪಸರಿಸುತ್ತಿದ್ದಾರೆ. ದೇಶದ ನಾನಾ ಭಾಗದಲ್ಲಿ ಯಕ್ಷಗಾನ ಆಯೋಜನೆ ಮಾಡುತ್ತಿದ್ದಾರೆ. ಕಲೆಯ ಅಭಿವೃದ್ಧಿಗೆ ಶ್ರಮ ಪಡುವ ಜೊತೆಗೆ ಕಲಾವಿದನ ಬದುಕಿನ ಅಭಿವೃದ್ಧಿಗೂ ಪಟ್ಲ ಶ್ರಮಿಸುತ್ತಿದ್ದಾರೆ. ಇದು ಅತ್ಯಂತ ಶ್ಲಾಘನೀಯ ಸಂಗತಿಯಾಗಿದೆ. ಪ್ರಪಂಚದಲ್ಲಿ ಪುರಾತನವಾದ ನಮ್ಮ ನಾಗರೀಕತೆಯನ್ನು ಮುಂದೆಯೂ ಉಳಿಸಬೇಕು. ಯಕ್ಷಗಾನದಂತಹ ಕಲೆ ಮುಂದಿನ ಪೀಳಿಗೆಗೂ ಉಳಿಯಬೇಕು” ಎಂದರು.

ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,  ಬಂಟರ ಸಂಘ ಮುಂಬೈಯ ಪ್ರಾದೇಶಿಕ ಸಮಿತಿಯ ಸೆಂಟ್ರಲ್ ವಲಯದ ಸಮನ್ವಯಕ್ ರವೀಂದ್ರನಾಥ್ ಎಂ ಭಂಡಾರಿ.     ಬಜಪೆ ಬಂಟರ ಸಂಘದ ಅಧ್ಯಕ್ಷ ಬಾಬು ಶೆಟ್ಟಿ ಪೆರಾರ ಮುಂಬೈ ಹರ್ಬಲ್ ಗ್ರೂಫ್ ಆಫ್ ಕಂಪೆನಿ ಅಧ್ಯಕ್ಷ ಕೆ. ಶ್ಯಾಮ ಪ್ರಸಾದ್ ಉದ್ಯಮಿ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಪುರುಷೋತ್ತಮ್ ಶೆಟ್ಟಿ, ಕಿಮ್ಮನೆ ಆದಿತ್ಯ, ಭುವನೇಶ್ ಪಚ್ಚಿನಡ್ಕ, ರವಿನಾಥ್ ಶೆಟ್ಟಿ, ,, ದೆಹಲಿ ಘಟಕದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, , ರಾಜೀವ್ ಪೂಜಾರಿ ಕೈಕಂಬ, ಸತೀಶ್ ಶೆಟ್ಟಿ ಎಕ್ಕಾರ್, ಉಮೇಶ್ ಭಂಡಾರಿ, ಜಗದೀಶ್ ಶೆಟ್ಟಿ, ಗಣೇಶ್, ತಾರಾನಾಥ್ ಶೆಟ್ಟಿ ಬೋಳಾರ್, ಉಮೇಶ್ ಶೆಟ್ಟಿ, ಹೇಮಂತ್ ರೈ,  ಯಶೋಧರ್, ಸತೀಶ್ ಶೆಟ್ಟಿ, ಪಿ.ಆರ್. ಶೆಟ್ಟಿ, ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಡಾ. ಮನು ರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ , ಕೋಶಾಧಿಕಾರಿ CA ಸುದೇಶ್ ಕುಮಾರ್, ಸುಧಾಕರ್ ಎಸ್. ಪೂಂಜಾ, , ಪ್ರಕಾಶ್ ರಾವ್, ಕೇಂದ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ,  ಜಗನ್ನಾಥ ಶೆಟ್ಟಿ ಬಾಳ, ರವಿಚಂದ್ರ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಕರ್ನೂರು ಮೋಹನ್ ರೈ, ನಿತೇಶ್ ಶೆಟ್ಟಿ ಎಕ್ಕಾರ್,    ಕಾರ್ಯಕ್ರಮ ನಿರೂಪಿಸಿದರು. ದೇವದಾಸ್ ಶೆಟ್ಟಿ ತುಂಬೆ ಧನ್ಯವಾದ ಸಮರ್ಪಿಸಿದರು.

—————————

ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ”ಕನ್ಯಾಡಿ ಶ್ರೀ 

ಆಶೀರ್ವಚನಗೈದ ಕನ್ಯಾಡಿ ಶ್ರೀ ರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, “ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂಬ ನಾಣ್ಣುಡಿಯಂತೆ ನಾವು ಬದುಕಬೇಕು. ಮನುಷ್ಯ ಜನ್ಮವನ್ನು ನಮಗೆ ಭಗವಂತ ನೀಡಿದ್ದಾನೆ. ನಾವು ಜನ್ಮವನ್ನು ಸಾರ್ಥಕಗೊಳಿಸಬೇಕು. ಬದುಕಿನಲ್ಲಿ ಯಜ್ಞವನ್ನು ಭಗವಂತ ಸೃಷ್ಟಿ ಮಾಡುತ್ತಾನೆ. ಪಟ್ಲರದ್ದು ಕೂಡಾ ಸಾಮಾಜಿಕ ಯಜ್ಞ. ಈ ಮೂಲಕ ಜನರಿಗೆ ಪಟ್ಲ ನೆರವಾಗುತ್ತಿದ್ದಾರೆ. ಪಟ್ಲರಲ್ಲಿ ಸರಳತೆ, ಸಜ್ಜನಿಕೆ ಎರಡೂ ಇದೆ. ನಾವು ನಮ್ಮ ನಮ್ಮ ಕೆಲಸವನ್ನು ಸರಿಯಾಗಿ ಮಾಡಿದರೆ ಭಗವಂತನ ಕೃಪೆ ಇರುತ್ತದೆ. ಒಳ್ಳೆಯ ಕೆಲಸಗಳಿಗೆ ಸಂಪತ್ತನ್ನು ದಾನ ಮಾಡಿದರೆ ಅದು ವ್ಯರ್ಥವಾಗುವುದಿಲ್ಲ. ಪಟ್ಲ ಫೌಂಡೇಶನ್ ಕೈಗೊಂಡಿರುವ ಈ ಸಮಾಜಮುಖಿ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸುವ ಮೂಲಕ ಸಮಾಜದ ಅಶಕ್ತರಿಗೆ ನೆರವಾಗೋಣ” ಎಂದರು.

———

ಪಟ್ಲ ಸತೀಶ್ ಶೆಟ್ಟಿಯವರ ಸಾಧನೆ ಮೆಚ್ಚುವಂತದ್ದು :  ಕೆ.ಎಂ. ಶೆಟ್ಟಿ

ಮುಂಬೈ ಉದ್ಯಮಿ ವಿಕೆ ಗ್ರೂಪ್ ಆಫ್ ಕಂಪೆನಿಯ ಆಡಳಿತ ನಿರ್ದೇಶಕ  ಕೆ.ಎಂ. ಶೆಟ್ಟಿ ಮಾತನಾಡಿ, “ಪಟ್ಲ ಸತೀಶ್ ಶೆಟ್ಟಿಯವರ ಸಾಧನೆಯನ್ನು ಎಷ್ಟು ಹೊಗಳಿದರೂ ಕಡಿಮೆ. ಸಾಮಾಜಿಕವಾಗಿ ಯಕ್ಷಗಾನ ಕಲಾವಿದರ ಸಂಕಷ್ಟಗಳಿಗೆ ನೆರವಾಗುತ್ತಿರುವ ಅವರ ಕಾರ್ಯವೈಖರಿ ಮೆಚ್ಚುವಂತದ್ದು” ಕಲೆ ಕಲಾವಿದರಿಗೆ ಸದಾ ಸಹಕಾರ ನೀಡುತ್ತಿರುವ ಈ ಸಂಸ್ಥೆಯೊಂದಿಗೆ ನಮ್ಮ ಹೊಸ ಬೆಂಬಲ ಸದಾ ಇದೆ   ಎಂದರು.

——–+——-

ಯಕ್ಷಗಾನ ಕಲೆ ನಾಡಿಗೆ ಕೀರ್ತಿ: ರವೀಂದ್ರನಾಥ್ ಭಂಡಾರಿ ,

ಬಂಟರ ಸಂಘ ಮುಂಬೈಯ ಪ್ರಾದೇಶಿಕ ಸಮಿತಿಯ ಸೆಂಟ್ರಲ್ ವಲಯದ ಸಮನ್ವಯಕ್ ರವೀಂದ್ರನಾಥ್ ಎಂ ಭಂಡಾರಿ ಮಾತನಾಡಿ ಯಕ್ಷಗಾನದ ಮೂಲಕ ನಮ್ಮ ನಾಡಿನ ಕೀರ್ತಿ ಜಗತ್ತಿನಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಯಕ್ಷಗಾನ ಯುವ ಸಮುದಾಯದಲ್ಲಿ  ಧರ್ಮ ಜಾಗೃತಿ ಗೊಳಿಸಿದೆ ಅಂತ ಮಹಾನ್ ಕಲೆಯನ್ನು ಉಳಿಸಿವಲ್ಲಿ    ಕಲಾವಿದರ ಶ್ರಮ ಅಪಾರ. ಈ ಕಲಾವಿದರನ್ನು ಪ್ರೋತ್ಸಾಹಿಸುವ ಸೇವೆಯನ್ನು  ನಾವೆಲ್ಲರೂ    ನಿರಂತರ 

ಮಾಡೋಣ ಎಂದರು, 

——

ಪಟ್ಲ ಟ್ರಸ್ಟ್ ದೇವಸ್ಥಾನವಿದ್ದಂತೆ: ಐಕಳ ಹರೀಶ್ ಶೆಟ್ಟಿ 

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, “ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನುತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ. ಜನರಿಗೆ ನೆರವಾಗುವಾಗ ಆರೋಪ ಮಾಡುವವರು ಇದ್ದೇ ಇರುತ್ತಾರೆ. ನಾವು ಯಾವುದೇ ಕಾರಣಕ್ಕೂ ನಿಲ್ಲಬಾರದು. ಯಾರೇನೇ ಹೇಳಿದರೂ ನಮ್ಮ ಗುರಿ ಸ್ಪಷ್ಟವಾಗಿದ್ದು ಮುಂದುವರಿಯಬೇಕು” ಎಂದರು

Related posts

ಪುರಭವನದಲ್ಲಿ  ‘ಬಣ್ಣಗಳ ಭಾವಲೋಕ’ ಶಿಷ್ಯೆ-ಪ್ರಶಿಷ್ಯೆಯರ ಸಾಧನೆಯ ಸಂಭ್ರಮ: ಡಾ.ವಸುಂಧರಾ ದೊರೆಸ್ವಾಮಿ

Mumbai News Desk

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ

Mumbai News Desk

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk