30.5 C
Mumbai
June 8, 2026
Mumbai News Kannada
ತುಳುನಾಡು

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 





ಪಟ್ಲ ಸಂಭ್ರಮ ಅರ್ಥಪೂರ್ಣ ಕಾರ್ಯಕ್ರಮ: ಒಡಿಯೂರು ಶ್ರೀ *

ಚಿತ್ರ ವರದಿ ದಿನೇಶ್ ಕುಲಾಲ್ 

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ ಆದಿತ್ಯವಾರ ಸಂಜೆ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಪಾಲ್ಕೊಂಡು ಪ್ರಶಸ್ತಿ ಪ್ರಧಾನವನ್ನು ಮಾಡಿ ಆಶೀರ್ವಚನದ ನುಡಿಗಳನ್ನಾಡಿದ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಪಟ್ಲ ಸತೀಶ್ ಶೆಟ್ಟಿ ಅವರು ನಿಜವಾದ ಬಿಗ್ ಬಾಸ್. ಒಂದು ಉತ್ತಮ ಕಾರ್ಯಕ್ಕಾಗಿ ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ದಾನಿಗಳನ್ನು ನೋಡಬೇಕಾದರೆ ನಾವು ಪಟ್ಲ ಸಂಭ್ರಮಕ್ಕೆ ಬರಬೇಕು. ಎಲ್ಲಿ ಎಲ್ಲ ಬೇಧ ಭಾವ ಮರೆತು ಒಂದಾಗಿ ಸಮಾಜಮುಖಿ ಚಿಂತನೆಯ ಕಾರ್ಯದಲ್ಲಿ ಬೆರೆಯುವುದನ್ನು ನೋಡುವುದೇ ಚೆಂದ. ಅರ್ಥಪೂರ್ಣವಾದ ಕಾರ್ಯಕ್ರಮ ಮುಂದೆಯೂ ಇದೇ ರೀತಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಕೆಮಿಕಲ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಕೆ.ಕೆ. ಶೆಟ್ಟಿ, ಫಾರ್ಚುನ್ ಗ್ರೂಫ್ ಮಾಲಕ ವಕ್ವಾಡಿ ಪ್ರವೀಣ್ ಶೆಟ್ಟಿ, ದುಬೈ. ಗೋಪಾಲ ಶೆಟ್ಟಿ, ಬಿಲ್ಲವ ಚೇಂಬರ್   ಆಫ್ ಕೋಮರ್ಸ್ ಅಂಡ್ ಇಂಡಸ್ಟ್ರೀಸ್ ಕಾರ್ಯ ಧ್ಯಕ್ಷ ಎನ್ .ಟಿ. ಪೂಜಾರಿ, ಬಂಟರ ಸಂಘ ಮುಂಬೈಯ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್. ಮುಂಬೈಬಂಟರ ಸಂಘದ ಜೊತೆ  ಕೋಶಧಿಕಾರಿ ಶಶಿಧರ್ ಶೆಟ್ಟಿ ಇನ್ನಂಜೆ 

ರಘು ಎಲ್. ಶೆಟ್ಟಿ, ತಲ್ಲೂರು ಶಿವರಾಮ್ ಶೆಟ್ಟಿ, ಸಂತೋಷ್ ಕುಮಾರ್ ರೈ,  ಕನ್ಯಾನ ರಘುರಾಮ ಶೆಟ್ಟಿ, ಹರೀಶ್ ಶೇರಿಗಾರ್ ದುಬೈ, ಅಶೋಕ್ ಶೆಟ್ಟಿ ಬೆಳ್ಳಾಡಿ

ಆನಂದ್ ಸಿ. ಕುಂದರ್, ಕೃಷ್ಣಮೂರ್ತಿ ಮಂಜ,  ಅಮರಾನಾಥ ಎಸ್.ಎಸ್. ಭಂಡಾರಿ, ಸುಧಾಕರ್ ಶೆಟ್ಟಿ ಸುಗ್ಗಿ, , ಉಳಿ ಯೋಗೀಂದ್ರ ಭಟ್ ಯುಎಸ್ಎ, ಆಶಾ ಆನಂದ ಶೆಟ್ಟಿ, ಮುಂಬೈಯ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಉಳ್ತೂರು, ಅಜಿತ್ ಶೆಟ್ಟಿ ಅಂಕಲೇಶ್ವರ, , ಪಟ್ಲ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಸಿಎ ಸುದೇಶ್ ಕುಮಾರ್ ರೈ, ಅಶೋಕ್ ಶೆಟ್ಟಿ ಪೆರ್ಮುದೆ ಕಲ್ಪವೃಕ್ಷ , ಉದಯ ಕುಮಾರ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ರವಿಚಂದ್ರ ಶೆಟ್ಟಿ,  ಡಾ. ಮನು ರಾವ್, ದುರ್ಗಾ ಪ್ರಕಾಶ್ ಪಡುಬಿದ್ರೆ,  ಜಗನ್ನಾಥ ಶೆಟ್ಟಿ ಬಾಳ, ರಾಜೀವ ಪೂಜಾರಿ ಕೈಕಂಬ ಮತ್ತಿತರರು ಉಪಸ್ಥಿತರಿದ್ದರು.

ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. 

2024ರ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ ಪುರಸ್ಕೃತ ಸಿಎ ದಿವಾಕರ್ ರಾವ್ ಹಾಗೂ ಶೈಲಾ ದಿವಾಕರ್ ದಂಪತಿಯನ್ನು ಸನ್ಮಾನಿಸಲಾಯಿತು.

ಪ್ರದೀಪ್ ಆಳ್ವ ಕದ್ರಿ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ‌ ನಿರ್ವಹಿಸಿದರು.

———-

ಹಿರಿಯ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿ. 1. ಲಕ್ಷ  ನಗದ .

ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು  ನೀಡಿ ಗೌರವಿಸಲಾಯಿತು.

 ಪ್ರಶಸ್ತಿ ಸ್ವೀಕರಿಸಿ ಮಾತಾಡಿದ ಅವರು, “ಕಲಾವಿದನಾದವ ಪ್ರಶಸ್ತಿಗಾಗಿ ಫೈಲ್ ಹಿಡಿದುಕೊಂಡು ರಾಜಕಾರಣಿಗಳ ಹತ್ರ ಹೋಗುವುದು, ಇನ್ ಫ್ಲುಯೆನ್ಸ್ ಮಾಡುವುದು ಮಾಡಬಾರದು. ಪ್ರಶಸ್ತಿಗೆ ನಾವು ಯೋಗ್ಯರಾಗಿದ್ದರೆ ಅದು ಹುಡುಕಿಕೊಂಡು ಬರುತ್ತದೆ. ಆಗಮಾತ್ರ ಆ ಪ್ರಶಸ್ತಿಗೆ ಮರ್ಯಾದೆ ಜಾಸ್ತಿ. ಯಕ್ಷಗಾನ ಕಲೆಗೆ ನೀರು, ಗೊಬ್ಬರ ಹಾಕಿ ಬೆಳೆಸಿದವರು ಹಳೆಯ ತಲೆಮಾರಿನವರು. ಈಗ ಆ ಕೆಲಸವನ್ನು ಪಟ್ಲ ಫೌಂಡೇಶನ್ ಮಾಡುತ್ತಾ ಬಂದಿದೆ. ಇಂತಹ ಸಂಘಟನೆ ನೂರುಕಾಲ ಬಾಳಲಿ” ಎಂದರು. 

————-

ನನ್ನ ಅಮ್ಮ ತುಳುವಿನ ವರು ಆಗಿರುವ ಕಾರಣ ನಾನು ಕೂಡಾ ತುಳುವ.: -ಕಿಚ್ಚ ಸುದೀಪ* 

ಎಂಚಿನ ಮಾರಾಯರೆ! ವನಸ್.. !! ಎನ್ನುತ್ತಾ ತುಳು ಭಾಷೆಯಿಂದಲೇ ಮಾತನ್ನು ಪ್ರಾರಂಭಿಸಿದ ನಟ ನಿರ್ದೇಶಕ  ಕಿಚ್ಚ ಸುದೀಪ ಅವರು   ಪಟ್ಲ ಫೌಂಡೇಶನ್

ಆಲದ ಮರ ಇದ್ದಂತೆ, ಕಲಾವಿದರ ಕಷ್ಟವನ್ನು ಅರಿತು ಸಂಘಟನೆ ಅವರನ್ನು ಸಲಹುತ್ತಿದೆ. ಪಟ್ಲ ಸತೀಶ್ ಶೆಟ್ಟಿಯವರ ಸಾಮಾಜಿಕ ಕಾರ್ಯ ಅದ್ಭುತವಾದದ್ದು. ಅವರ ಬಗ್ಗೆ ತಿಳಿಯುತ್ತಾ ಹೋದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ದಾನಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಖುಷಿಯಾಗುತ್ತದೆ. ಊರು ಊರು ಸುತ್ತಿದ್ರು ನನ್ನಪ್ಪನಿಗೆ ಸಂಗಾತಿ ಸಿಕ್ಕಿದ್ದು ತುಳು ನಾಡಿಂದ.ನನ್ನ ಅಮ್ಮ ಇಲ್ಲಿಯವರೇ ಆಗಿರುವ ಕಾರಣ ನಾನು ಕೂಡಾ ತುಳುವನೇ ಆದರೆ ನನಗೆ  ಅಮ್ಮ ತುಳು ಮಾತಾಡಲು ಕಲಿಸಿಲ್ಲ. ನನಗೆ ತಿಳಿದಂತೆ ಮಂಗಳೂರಿನ ಜನರು ಸ್ವಾಭಿಮಾನಿಗಳು. ಇಲ್ಲಿನ ಜನರ ಮನಸ್ಸಲ್ಲಿ ಇಷ್ಟು ಪ್ರೀತಿ ಸಿಕ್ಕಿರುವುದೇ ನನ್ನ ಭಾಗ್ಯ” ಎಂದು ಕನ್ನಡ ಚಿತ್ರರಂಗದ ಖ್ಯಾತನಟ ಕಿಚ್ಚ ಸುದೀಪ್ ಹೇಳಿದರು.



Related posts

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk