24.7 C
Karnataka
April 3, 2025
ತುಳುನಾಡು

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ



 ಉಡುಪಿ ಮೇ 28.   ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಶ್ರೀ ಮಹಾ ಚಂಡಿಕಾಯಾಗ ಮಹಾ ಸಂಪ್ರೋಕ್ಷಣೆ ಮಹಾಮಂತ್ರಕ್ಷತೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು…

 ಕ್ಷೇತ್ರದಲ್ಲಿ ಕಿಕ್ಕಿರಿದು ತುಂಬಿದ ಭಕ್ತ ಸಮೂಹದ ಸಮಕ್ಷಮದಲ್ಲಿ ಕೊಲಕಡಿ   

ವೇದಮೂರ್ತಿ ವಾದಿರಾಜ ಉಪಾಧ್ಯಾಯ ಅವರು ಚಂಡಿಕಾಯಾಗ ನೆರವೇರಿಸಿದರು..

 ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಆಚಾರ್ಯ ಪೂಜೆ ದಂಪತಿ ಪೂಜೆ ಬ್ರಹ್ಮಚಾರಿ ಆರಾಧನೆಗಳು  ನೆರವೇರಿದವು.. 

 ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ  ಭ್ರಮರಿ ನಾಟ್ಯಾಲಯದ ವಿದ್ವಾನ್ ಭವಾನಿ ಶಂಕರ್ ಅವರ ಶಿಷ್ಯರಿಂದ ನೆರವೇರಿತು..

 ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಅಮ್ಮ ಡ್ರೀಮ್ಸ್ ಮೆಲೋಡಿಸ್  ನ  ಕಲಾವಿದರಾದ ಶ್ರೀಯುತ ಸುನಿಲ್ ಅಶ್ವಿನಿ ಹಾಗೂ ಬೇಬಿ ಪ್ರಿಯ ಸಂಗೀತ ಕಾರ್ಯಕ್ರಮ ನೆರವೇರಿಸಿದರು..

     ಮೃಷ್ಟಾನ್ನ ಸಂತರ್ಪಣೆಯ ನಂತರ ವಿಪ್ರೊತ್ತಮರಿಂದ  ದೇವಳದ ಪ್ರಾಂಗಣದಲ್ಲಿ  ಮಹಾಮಂತ್ರಾಕ್ಷತೆ ಸ್ವೀಕರಿಸಲಾಯಿತು..

  ಕಿಕ್ಕಿರಿದ  ಭಕ್ತ ಸಮೂಹದೊಂದಿಗೆ ಸಂಪನ್ನಗೊಂಡ ಚಂಡಿಕಾಯಾಗದ  ನೇತೃತ್ವವನ್ನು ಆನಂದ್ ಭಟ್ ಹೇರೂರು ಹಾಗೂ ಶ್ರೀ ಗಣೇಶ ಸರಳಾಯ  ವಹಿಸಿದ್ದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Related posts

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk