
ಮಂಗಳೂರು ಮೇ 30. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.
ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು .ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿಯವರ ಹೂ ಗುಚ್ಚ ನೀಡಿ ಅಭಿನಂದಿಸಿದ್ದಾರೆ.