36.8 C
Karnataka
March 29, 2025
ಕರ್ನಾಟಕ

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

ಬೆಂಗಳೂರು, ಮೇ 31: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ನಾವು ಕಾರ್ಪೊರೇಟ್ ಪಾರ್ಟಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಶನಿವಾರ ಸಂಜೆಯೇ ಮದ್ಯ ಮಾರಾಟದ ಮೇಲಿನ ನಿಷೇಧವು ಪ್ರಾರಂಭವಾಗುತ್ತದೆ. ಇದರಿಂದ ದಿನಕ್ಕೆ 30 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಲಿದೆ ಎಂದು ಮಾರತಹಳ್ಳಿಯಲ್ಲಿರುವ ದೊಡ್ಡ ರೆಸ್ಟೋಬಾರ್‌ಗಳ ಕಾರ್ಯಾಚರಣೆಯ ಮುಖ್ಯಸ್ಥರೊಬ್ಬರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ನಾವು ಅತಿಹೆಚ್ಚು ತೆರಿಗೆ ಪಾವತಿದಾರರಾಗಿದ್ದೇವೆ. ಆದರೂ ಮದ್ಯ ಮಾರಾಟಕ್ಕೆ ಪದೇಪದೆ ಅಡ್ಡಿಯುಂಟು ಮಾಡಲಾಗುತ್ತಿದೆ. ಮದ್ಯ ಮಾರಾಟ ನಿಷೇಧದಿಂದ nಮಗೆ ಭಾರಿ ಹಿನ್ನಡೆಯಾಗಲಿದೆ. ವಾರಾಂತ್ಯದಲ್ಲಿ ಶೇ 60 ವರೆಗೆ ಮದ್ಯ ಮಾರಾಟವಾಗುತ್ತದೆ. ಇದೀಗ ನಿಷೇಧದಿಂದ ಸರಿಸುಮಾರು ಶೇ 40 ರಷ್ಟು ನಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಆಹಾರ ಪೂರೈಸಲು ಪಬ್‌ಗಳು ಮತ್ತು ರೆಸ್ಟೋಬಾರ್‌ಗಳಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್‌ಗಳ ಸಂಘದ (ಎನ್‌ಆರ್‌ಎಐ) ಪ್ರತಿನಿಧಿಗಳು ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ (ಮುಂಬಯಿ ಮಾದರಿಯಲ್ಲಿ) ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್‌ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ.

ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ.
ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ.
ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್.

Related posts

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ

Mumbai News Desk

ಜೆಸಿಐ ವಲಯ 15ರ ವಲಯಾಧ್ಯಕ್ಷರಾಗಿ ಗಿರೀಶ್ ಎಸ್ ಪಿ ಆಯ್ಕೆ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk