36.8 C
Karnataka
March 29, 2025
ಕರ್ನಾಟಕ

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಕೇಳಿಬಂದಿದ್ದು, ಕೂಡಲೆ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಈ ಒತ್ತಡಕ್ಕೆ ಮಣಿದ ಮತ್ತು ಸರ್ಕಾರಕ್ಕೆ ಮುಜುಗರವಾಗಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನ

ಹಗರಣ ಸಂಬಂಧ ಗುರುವಾರ (ಮೇ 30) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ರಾಜಿನಾಮೆ ನೀಡುವಂತೆ ಬಿಜೆಪಿ ಒತ್ತಡ
ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಸರ್ಕಾರ ಮೇಲೆ ಒತ್ತಡ ಹೇರಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್​ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಬಿಜೆಪಿ ಮತ್ತು ಜೆಡಿಎಸ್​ ಆಗ್ರಹಿಸಿದ್ದರು. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್​ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಕರೆ ನೀಡಿತ್ತು

Related posts

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk

ಜೆಸಿಐ ವಲಯ 15ರ ವಲಯಾಧ್ಯಕ್ಷರಾಗಿ ಗಿರೀಶ್ ಎಸ್ ಪಿ ಆಯ್ಕೆ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ

Mumbai News Desk