April 1, 2025
ಪ್ರಕಟಣೆ

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

ಮುಂಬಯಿ : ಬಂಟರ ಸಂಘ ಮುಂಬಯಿ  ಜೋಗೇಶ್ವರಿ-ದಹಿಸರ್ ಸಮಿತಿಯ ವತಿಯಿಂದ ಜೂ. 8ರಂದು ಶನಿವಾರ  ಮಧ್ಯಾಹ್ನ ಗಂ.2.೦೦ ರಿಂದ  ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದ ಸಭಾಗೃಹದಲ್ಲಿ ಸಂಘದ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ ಹಾಗೂ ವಿಕಲ ಚೇತನರಿಗೆ 2024ರ ಆರ್ಥಿಕ ಸಹಾಯವನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಬಂಟರ ಸಂಘ ಮುಂಬಯಿಯ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಒಂದಾದ ಈ  ಕಾರ್ಯಕ್ರಮದ ಉದ್ಘಾಟನೆಯು ಜೂ. 2 ರಂದು ಕುರ್ಲಾ ಬಂಟರ ಭವನದದಲ್ಲಿ ಸಮಾಜದ ಗಣ್ಯರ ಹಾಗೂ ಕೊಡುಗೈ ದಾನಿಗಳ ಉಪಸ್ಥಿತಿಯಲ್ಲಿ ಜರಗಿದ್ದು, ಸಂಘದ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಕ್ರಮವು ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಉತ್ತರ ಮುಂಬಯಿಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಹಾಗೂ ಜನಪ್ರಿಯ ಸಮಾಜ ಸೇವಕರೂ ಆದ ಗೋಪಾಲ್ ಸಿ ಶೆಟ್ಟಿ ಯವರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಗೌ.  ಕೋಶಾಧಿಕಾರಿ ಸಿಎ ರಮೇಶ್ ಬಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಲ್ಲಾರ್, ಜೊತೆ ಕೋಶಾಧಿಕಾರಿ, ಶಶಿಧರ ಕೆ. ಶೆಟ್ಟಿ ಇನ್ನಂಜೆ, ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಇಂದ್ರಾಳಿ ದಿವಾಕರ್ ಶೆಟ್ಟಿ, , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಚಿತ್ರಾ ಆರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ. ಶೆಟ್ಟಿ, ಪಶ್ಚಿಮ ವಲಯದ ಪ್ರಾದೇಶಿಕ ಸಮಿತಿಗಳ ಸಂಚಾಲಕರಾದ ಭಾಸ್ಕರ್ ಶೆಟ್ಟಿ ಕಾಂದೇಶ್ ಉಪಸ್ಥಿತರಿರುವರು. 

ಜೋಗೇಶ್ವರಿಯಿಂದ ದಹಿಸರ್ ತನಕದ ಸಮಾಜ ಬಾಂಧವರಿಗೆ ಬಂಟರ ಸಂಘದ ಆರ್ಥಿಕ ಸಹಾಯವನ್ನು ಸಕಾಲದಲ್ಲಿ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದ ಯಶಸ್ವಿಗೆ ಸಂಚಾಲಕರಾದ ನಿಟ್ಟೆ ಮುದ್ದಣ್ಣ ಜಿ. ಶೆಟ್ಟಿ, ಉಪಕಾರ್ಯಾಧ್ಯಕ್ಷ ಗಂಗಾಧರ ಎ. ಶೆಟ್ಟಿ, ಕಾರ್ಯದರ್ಶಿ ರಮೇಶ್ ಶೆಟ್ಟಿ,ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯ ಶೆಟ್ಟಿ, ಕೋಶಾಧಿಕಾರಿ ಸಂಕೇತ್ ಎಸ್. ಶೆಟ್ಟಿ, ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಸಂಚಾಲಕಿ ಶೈಲಜಾ ಎ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಜ್ ಆರ್. ಶೆಟ್ಟಿ, ಮೊದಲಾದವರ ಸಹಕಾರದೊಂದಿಗೆ ಮುಖ್ಯ ಸಲಹೆಗಾರರಾದ ಮುಂಡಪ್ಪ ಎಸ್. ಪಯ್ಯಡೆ, ಮನೋಹರ ಎನ್. ಶೆಟ್ಟಿ, ನಿತ್ಯಾನಂದ ಹೆಗ್ಡೆ, ವಿಜಯ ಆರ್. ಭಂಡಾರಿ ಮತ್ತು  ರವೀಂದ್ರ ಎಸ್. ಶೆಟ್ಟಿ ಮತ್ತು ಎರ್ಮಾಳು ಹರೀಶ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ಅದ್ದೂರಿಯಾಗಿ ನಡೆಯಲಿದೆ. 

ಸಮಾಜ ಬಾಂಧವರ ಕಷ್ಟಗಳಿಗೆ ಸ್ಪಂದಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ವಿಧವೆಯರು ಹಾಗೂ ವಿಕಲ ಚೇತನರು ಆರ್ಥಿಕ ಧನಸಹಾದ  ಚೆಕ್ಕಿನ ಮೂಲಕ ಪಡೆಯಲಿದ್ದಾರೆ. ಈ ಎಲ್ಲಾ ಫಲಾನುಭವಿಗಳ ಸಂಪೂರ್ಣ ವಿವರಗಳು ಪ್ರಾದೇಶಿಕ ಸಮೀತಿಯಲ್ಲಿ ಹಾಗೂ ಬಂಟರ ಸಂಘದಲ್ಲಿ ಲಭ್ಯವಿದ್ದು ದೂರವಾಣಿಯ ಮೂಲಕ ಅವರೆಲ್ಲರನ್ನು ಈಗಾಗಲೇ ಸಂಪರ್ಕಿಸಿ ಕಾರ್ಯಕ್ರಮದ ಸಂಪೂರ್ಣ ವಿವರವನ್ನು ನೀಡಲಾಗಿದೆ. ಈ ಎಲ್ಲಾ ಸವಲತ್ತುಗಳನ್ನು ಸ್ವೀಕರಿಸಲಿರುವ 18 ವರ್ಷದ ಮೇಲಪಟ್ಟವರು  ಸ್ವತ: ಹಾಗೂ 18 ವರ್ಷಕ್ಕಿಂತ ಕಿರಿಯರ ಪಾಲಕರು ಬಂಟರ ಸಂಘದ ಸದಸ್ಯರಾಗಿರಬೇಕು. ಸಂಘದ  ಸದಸ್ಯತ್ವ ಕಾರ್ಡನ್ನು ಕಡ್ಡಾಯವಾಗಿ ತೋರಿಸತಕ್ಕದ್ದು. ಪ್ರಾದೇಶಿಕ ಸಮಿತಿಯ ವ್ಯಾಪ್ತಿಯಲ್ಲಿರುವ ಎಲ್ಲಾ ಸಮಾಜ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಯಾಧ್ಯಕ್ಷರಾದ ಶ್ರೀ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತ್ತಾರೆ.

ಪ್ರೇಮನಾಥ ಶೆಟ್ಟಿ ಕೊಂಡಾಡಿ ,

Related posts

ಜ.6ಕ್ಕೆ ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ, ವಾಗ್ಮಿ, ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ ಡೊಂಬಿವಲಿ : ಅ. 3ರಿಂದ ವಜ್ರ ಮಹೋತ್ಸವ ಆಚರಣೆ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk