32 C
Mumbai
March 7, 2026
Mumbai News Kannada
ಪ್ರಕಟಣೆ

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ





ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನೆಲೆ ನಿಂತಿರುವ ಶ್ರೀ ಮಾರಿಯಮ್ಮ ದೇವಿಯು ಅತ್ಯಂತ ಪ್ರಸಿದ್ಧಿಯನ್ನು ಹೊಂದಿದ್ದು ಜಗತ್ತಿನಾದ್ಯಂತ ನೆಲೆಸಿರುವ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದ್ದಾಳೆ. ಇದೀಗ ಕಾಪು ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದೆ. ನೂತನ ದೇಗುಲದಲ್ಲಿ 2025 ರ ಮಾರ್ಚ್ 2 ರಂದು ಅಮ್ಮನ ದಿವ್ಯ ಗದ್ದುಗೆಯು ಪ್ರತಿಷ್ಠಾಪನೆಗೊಳ್ಳಲಿದ್ದು, ತದನಂತರ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಪೀಠ ಸ್ವರ್ಣಮಯವಾಗಬೇಕೆಂಬ ಆಶಯದಿಂದ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯನ್ನು ರಚಿಸಲಾಗಿದೆ.


ಭಕ್ತರು ಹೊಸ ಚಿನ್ನದೊಂದಿಗೆ ಉಪಯೋಗಿಸಿದ ಚಿನ್ನದ ಆಭರಣವನ್ನು ಹರಕೆಯ ರೂಪದಲ್ಲಿ ಸಮರ್ಪಿಸುತ್ತಿದ್ದು ಇದಕ್ಕಾಗಿ ಅಮ್ಮನಲ್ಲಿ ನುಡಿಯನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸಿ ಸ್ವರ್ಣ ನೀಡಿದ ಭಕ್ತರ ಕಷ್ಟಕಾರ್ಪಣ್ಯಗಳನ್ನು ನನ್ನ ಕಾಲಬುಡಕ್ಕೆ ಹಾಕಿಕೊಳ್ಳುತ್ತೇನೆ ಎಂಬುವುದಾಗಿ ನುಡಿಯಾಗಿದೆ.


ದಿನಾಂಕ 25.06.2024 ರಂದು ಬೆಳಿಗ್ಗೆ ಗಂಟೆ 09:09 ಕ್ಕೆ ಸರಿಯಾಗಿ ದೇವಳದಲ್ಲಿ ಸ್ವರ್ಣಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಿಸುವ ಭಕ್ತಾದಿಗಳಿಗೆ ಸ್ವರ್ಣ ಸಂಕಲ್ಪವನ್ನು ಹಮ್ಮಿಕೊಳ್ಳಲಾಗಿದೆ. ನಂತರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಸ್ವರ್ಣ ಗದ್ದುಗೆ ಮಾದರಿ ಅನಾವರಣಗೊಳ್ಳಲಿದೆ.


ಸ್ವರ್ಣ ಸಂಕಲ್ಪದಲ್ಲಿ ಭಾಗವಹಿಸುವ ಭಕ್ತರು ಮುಂಗಡವಾಗಿ ತಮ್ಮ ಹೆಸರನ್ನು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿಯಲ್ಲಿ ನೋಂದಾಯಿಸಬೇಕು. ನಿಗದಿತ ಸ್ವರ್ಣ ಸಮರ್ಪಿಸಿದ ಭಕ್ತಾದಿಗಳಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಈ ಪುಣ್ಯ ಅವಕಾಶವನ್ನು ಭಕ್ತರೆಲ್ಲರೂ ಸದುಪಯೋಗಪಡಿಸಿಕೊಂಡು ಸ್ವರ್ಣ ಸಮರ್ಪಣಾ ಸಮಾರಂಭದಲ್ಲಿ ಅಥವಾ ಸನ್ನಿಧಾನದಲ್ಲಿ ಸ್ವರ್ಣ ಸಮರ್ಪಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ.

ವಿಶೇಷ ಸೂಚನೆ : ಸ್ವರ್ಣ ಸಮರ್ಪಣಾ ಸಮಾರಂಭ ಮತ್ತು ಸನ್ನಿಧಾನದಲ್ಲಿ ಹೊರತುಪಡಿಸಿ ಬೇರೆ ಎಲ್ಲಿಯೂ ಸ್ವರ್ಣವನ್ನು ಪಡೆದುಕೊಳ್ಳಲಾಗುವುದಿಲ್ಲ.



Related posts

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk