24.5 C
Karnataka
April 3, 2025
ತುಳುನಾಡು

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ



108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಮಹಾ ಸಂಕಲ್ಪದ ಅಂಗವಾಗಿ 5ನೇ ದಿನ ಜೂನ್ 18ರ ಮಂಗಳವಾರ ಶ್ರೀ ಕ್ಷೇತ್ರ ಶಂಕರಪುರ “ಏಕ ಜಾತಿ ಧರ್ಮ ಪೀಠ ದ್ವಾರಕಾಮಯಿ” ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಕಾಪು ಮಾರಿಯಮ್ಮನ ದರುಶನಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು.


ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು ಸಮಗ್ರ ಜಿರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದರು.


ಗುರೂಜಿ ಸಾಯಿ ಈಶ್ವರ್ ಅವರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ ಹಾಗೂ ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮನವಿ ನೀಡಿ ಬಿಲ್ವಪತ್ರೆಯ ಗಿಡ ನೀಡಿದರು.


ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಸಂಚಾಲಕ ಜಯರಾಮ್ ಆಚಾರ್ಯ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ. ಸುವರ್ಣ, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕಿ ಸಾವಿತ್ರಿ ಗಣೇಶ್, ದ್ವಾರಕಾಮಯಿ ಮಠದ ಟ್ರಸ್ಟಿ ಸುಧಾಕರ್ ಶೆಟ್ಟಿ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ವೀಣಾ ಶೆಟ್ಟಿ, ಅಭಿರಾಜ್ ಸುವರ್ಣ ಮತ್ತು ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk