
ಮುಂಬಯಿ : ಬೊಂಬೇ ಬಂಟ್ಸ್ ಅಸೋಷಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಜೂನ್ 21 ರoದು ಸಂಜೆ 4ಗಂಟೆಗೆ ಬಂಟ್ಸ್ ಸೆಂಟರ್ ಜೂಹಿ ನಗರ ಇಲ್ಲಿ ಬಂಟ್ಸ್ ಸೆಂಟರ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ . ಅಸೋಸಿಯೇಷನ್ ಅಧ್ಯಕ್ಷ ಶೆಟ್ಟಿ ಸಿ.ಎ. ಸುರೇಂದ್ರ ಕೆ ಶೆಟ್ಟಿ ಅವರು ಯೋಗ ದಿನಾಚರಣೆಗೆ ಚಾಲನೆ ನೀಡಲಿರುವರು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಶೆಟ್ಟಿ ಅವರ ನೇತೃತ್ವದಲ್ಲಿ , ಯೋಗ ಗುರು ಸ್ವಾತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಯೋಗ ದಿನಾಚರಣೆಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಕಾರ್ಯಕಾರಿ ಸಮಿತಿಯ ಪರವಾಗಿ ಉಪಾಧ್ಯಕ್ಷ ಅಡ್ವಕೇಟ್ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ, ಐಕಳ ಕಿಶೋರ್ ಕೆ ಶೆಟ್ಟಿ, ಕೋಷಾಧಿಕಾರಿ ಸಿ ಎ ವಿಶ್ವನಾಥ್ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ, ಜೊತೆ ಕೋಶಧಿಕಾರಿ ಸಿಎ ದಿವಾಕರ್ ಶೆಟ್ಟಿ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ, ಶಾಂತ ಎನ್ ಶೆಟ್ಟಿ, ಕಾರ್ಯದರ್ಶಿ ಶಹಾನಿ ಶೆಟ್ಟಿ, ಜೊತೆ ಕಾರ್ಯದರ್ಶಿ ಲಲಿತ ಶೆಟ್ಟಿ, ಕೋಶಾಧಿಕಾರಿ ಉಷಾ ಶೆಟ್ಟಿ, ಜೊತೆ ಕೋಶಾಧಿಕಾರಿ ಮಾಯ ಶೆಟ್ಟಿ ಯುವ ವಿಭಾಗದ ಕಾರ್ಯಧ್ಯಕ್ಷೆ ದೃಶ್ಯ ಕೆ ಶೆಟ್ಟಿ ವಿನಂತಿಸಿದ್ದಾರೆ