July 23, 2026
Mumbai News Kannada
ಸುದ್ದಿ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.







  ಬೆಂಗಳೂರು ಜೂ 30 ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಜೂ29 ರಂದು    ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ  ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದರು. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.

ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ʻಜನಾನುರಾಗಿʼ ಎಂಬ ಹೆಸರು ಪಡೆದಿದ್ದ ಅವರು, ತಮ್ಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

ಹಂಸ ಮೊಯ್ಲಿ ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿ. ಇತ್ತೀಚೆಗೆ ಮಕ್ಕಳಿಗಾಗಿ ಹಿಂದಿ ನಾಟಕ, ಕ್ಯುನ್ ಕ್ಯುನ್ ಲಡ್ಕಿ, ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ರವೀಂದ್ರನಾಥ ಟಾಗೋರ್ ಅವರು ಬರೆದ ಮಕ್ಕಳಿಗಾಗಿ ಇಂಗ್ಲಿಷ್ ನಾಟಕವನ್ನು ನೃತ್ಯ ಸಂಯೋಜನೆ ಮಾಡಿದ್ದಾರೆ.



Related posts

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk