
ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಇಂದು ದಿನಾಂಕ 09-07-2024 ರಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಅವರೊಂದಿಗೆ ಭೇಟಿ ನೀಡಿದರು.

ದೇವಸ್ಥಾನದ ತಂತ್ರಿವರ್ಯರಾದ ಕೆ. ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನಲ್ಲಿ ಪ್ರಾಥಿಸಿ ಸೂರ್ಯ ಕುಮಾರ್ ದಂಪತಿಗೆ ಅನುಗ್ರಹ ಪ್ರಸಾದ ನೀಡಿದರು, ಹಾಗೂ ಸೂರ್ಯ ಕುಮಾರ್, ದೇವಿಶಾ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.




ಇದೇ ಸಂಧರ್ಭ, 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.