ಮುಂಬಯಿ ಜು19. ಬಂಟರ ಸಂಘ ಮುಂಬಯಿ ಮತ್ತು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಜಂಟಿ ಆಯೋಜನೆಯಲ್ಲಿ ಗುರುಪೂರ್ಣಿಮೆಯ ಆಚರಣೆಯು ಜುಲೈ 21ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿದೆ.
ಮಧ್ಯಾಹ್ನ 3.30 ಭಜನೆ. ಸಂಜೆ 5 ಗಂಟೆಗೆ ಶ್ರೀ ಕ್ಷೇತ್ರ ಓಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ , ಶ್ರೀ ಸ್ವಾದಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತಿಯಲ್ಲಿ ರಾತ್ರಿ 7:00 30 ಕ್ಕೆ ಮಹಾಮಂಗಳಾರತಿ ನಡೆಯಲಿದೆ .ರಾತ್ರಿ ಮಹಾಪೂಜೆಯ ಬಳಿಕ ಮನೀಶ್ ಕ್ಯಾಟರಿಂಗ್ ನ ಮಾಲಕ ವಾಮನ್ ಶೆಟ್ಟಿ ಅವರ ಆಯೋಜನೆಯಲ್ಲಿ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ .
ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಬೇಕಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ . ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾದ ದಾಮೋದರ್ ಎಸ್ ಶೆಟ್ಟಿ ಮತ್ತು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ