ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿಯ ವತಿಯಿಂದ ಗುರುಪೂರ್ಣಿಮೆ ಆಚರಣೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜು 21 ರಂದು ರವಿವಾರ ಸಂಜೆ 5 ಗಂಟೆಗೆ ಮಲಾಡ್ ಪೂರ್ವದಲ್ಲಿರುವ ಅಸೋಸಿಯೇಷನ್ ಸ್ಥಳೀಯ ಕಾರ್ಯಾಲಯದಲ್ಲಿ ನಡೆಯಲಿದೆ.
ಸಂಜೆ 5:00ಗೆ ಭಜನೆ 6.30 ಮಂಗಳಾರತಿ ಬಳಿಕ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ಬಿಲ್ಲವರ ಅಸೋಸಿಯೇಷನ್ ಮುಂಬಯಿ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸ್ಥಳೀಯ ಕಾರ್ಯಧ್ಯಕ್ಷರು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.