24.7 C
Karnataka
April 3, 2025
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಜುಲೈ 28 ರಂದು ಆಷಾಢೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ



ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಸಹಕಾರದೊಂದಿಗೆ ಮಹಿಳಾ ಸಮಿತಿಯ ಸಂಯೋಜನೆಯಲ್ಲಿ ಜುಲೈ 28 ರವಿವಾರದಂದು ಸಂಜೆ ಗಂಟೆ 4-00 ರಿಂದ ಥಾಣೆ ರೈಲ್ವೆ ನಿಲ್ದಾಣದ ಸಮೀಪವಿರುವ ನಾಮ್ದೇವ್ ವಾಡಿ ಸಭಾಗೃಹ, ಮೊದಲನೇ ಮಹಡಿ, ಮಹರ್ಷಿ ಕರ್ವೆ ಮಾರ್ಗ, ನ್ಯೂ ಇಂಗ್ಲೀಷ್ ಸ್ಕೂಲ್ ಹತ್ತಿರ, ನೌಪಾಡ, ಥಾಣೆ (ಪಶ್ಚಿಮ) ಇಲ್ಲಿ ಆಷಾಢೋತ್ಸವ ಆಚರಣೆ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಅಂದು ಆಷಾಢೋತ್ಸವದ ಅಂಗವಾಗಿ ಮಹಿಳಾ ಸದಸ್ಯೆಯರು ಕುಂದಾಪುರ ಶೈಲಿಯ ವಿವಿಧ ಖಾದ್ಯ-ವೈವಿಧ್ಯಗಳನ್ನು ಪರಿಚಯಿಸಲಿದ್ದು, ಮನೋರಂಜನೆಯ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವೇದಿಕೆಯಲ್ಲಿ ಉಪಸ್ಥಿತ ಅತಿಥಿ ಗಣ್ಯರು ಜ್ಯೋತಿ ಪ್ರಜ್ವಲಿಸಿವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಸದಸ್ಯರು, ಸಮಾಜ ಬಾಂಧವರು ಹಾಗೂ ಹಿತಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ, ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷೆ ದೀಪಾ ವೈ. ಪೂಜಾರಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ ವಿ. ಪೂಜಾರಿ, ಮಹಿಳಾ ಸಮಿತಿಯ ಗೌರವ ಕಾರ್ಯಾಧ್ಯಕ್ಷೆ ಸಂತೋಷಿ ಎಸ್. ಪೂಜಾರಿ, ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಉಪಕಾರ್ಯಾಧ್ಯಕ್ಷೆಯರಾದ ಯಶೋದಾ ಎಸ್. ಪೂಜಾರಿ, ರೇಖಾ ಎನ್. ಬಿಲ್ಲವ ಕಾರ್ಯದರ್ಶಿ ಗಿರಿಜಾ ಬಿ. ಪೂಜಾರಿ, ಜತೆ ಕಾರ್ಯದರ್ಶಿಗಳಾದ ಶಾರದಾ ಬಿ. ಪೂಜಾರಿ, ಕುಸುಮ ಎ. ಪೂಜಾರಿ, ಮತ್ತು ಆಡಳಿತ ಮಂಡಳಿ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತ ಮಂಡಳಿ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರನ್ನು (8269100713/9619888160 ) ಸಂಪರ್ಕಿಸಬಹುದೆಂದು ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ತಿಳಿಸಿದ್ದಾರೆ.

Related posts

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾರೋಡ್, ನ.27 ರಂದು ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk