ನವಿ ಮುಂಬಯಿ : ಜು 24.ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲೊಂದಾದ ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ ಮತ್ತು ಐತಿಹಾಸಿಕ ತುಳುನಾಡ ರಾಣಿ ಅಬ್ಬಕ್ಕ ತುಳು ನಾಟಕವು ಜುಲೈ 27ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನವಿ ಮುಂಬಯಿ ಜೂಯಿನಗರದ ಸೆಕ್ಟರ್ 24ರಲ್ಲಿರುವ ಬಂಟ್ಸ್ ಸೆಂಟರ್‌ನಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಥಾಣೆ ಬಂಟ್ಸ್ ನ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತಾರಾ ಶೆಟ್ಟಿ ಹಾಗೂ ಮುಲುಂಡ್ ಬಂಟ್ಸ್ ನ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆರತಿ ವೈ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಅಸೋಸಿಯೇಷನ್ ಮಹಿಳಾ ವಿಭಾಗದ ಮಾಜಿ ಕಾರ್ಯಧ್ಯಕ್ಷೆಯರುಗಳಾದ ವಿನಿತ ಸಿ ಶೆಟ್ಟಿ ,ಆಶಾ ಎಸ್ ಶೆಟ್ಟಿ ,ಲತಾ ಜಿ ಶೆಟ್ಟಿ ,ಅವರನ್ನು ಸನ್ಮಾನಿಸಲಾಗುವುದು.
ಸಭಾ ಕಾರ್ಯಕ್ರಮದ ಮೊದಲು ಮತ್ತು ನಂತರ ಅಸೋಸಿಯೇಷನ್ ನ ಮಹಿಳಾ ವಿಭಾಗದ ಸದಸ್ಯರಿಂದ ನೃತ್ಯ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟಿ ತಿಂಗಳಿನ ಬಗ್ಗೆ ಮಾತುಗಳು ಹಾಗೂ ಮಹಿಳಾ ಸದಸ್ಯರು ಅಭಿನಯಿಸುವ ನಾರಾಯಣ್ ಶೆಟ್ಟಿ ನಂದಳಿಕೆ ಅವರು ರಚಿಸಿ,ನಿರ್ದೇಶಿಸಿರುವ ಮನೋವರ ಶೆಟ್ಟಿ ನಂದಳಿಕೆಯ ಸಲಹೆ ಸಹಕಾರದ ತುಳು ಐತಿಹಾಸಿಕ ನಾಟಕ “ತುಳುನಾಡ ರಾಣಿ ಅಬ್ಬಕ್ಕ” ಪ್ರದರ್ಶನಗೊಳ್ಳಲಿದೆ,
ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಉಪಾಧ್ಯಕ್ಷ ಅಡ್ವಕೇಟ್ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ ಶೆಟ್ಟಿ, ಕೋಶಧಿಕಾರಿ ಸಿ ಎ ವಿಶ್ವನಾಥ್ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ,ಜೊತೆ ಕೋಶಧಿಕಾರಿ ಸಿಎ ದಿವಾಕರ್ ಶೆಟ್ಟಿ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ, ಶಾಂತ ಎನ್. ಶೆಟ್ಟಿ, ಕಾರ್ಯದರ್ಶಿ ಸಹಾನಿ ವಿ. ಶೆಟ್ಟಿ, ಕೋಶಾಧಿಕಾರಿ ಉಷಾ ಆರ್. ಶೆಟ್ಟಿ, ಜೊತೆ ಕಾರ್ಯದರ್ಶಿ ಲಲಿತ ಬಿ ಶೆಟ್ಟಿ, ಜೊತೆ ಕೋಶಾಧಿಕಾರಿ ಮಾಯಾ ಎಸ್ ಆಳ್ವ , ಯುವ ವಿಭಾಗದ ಕಾರ್ಯಧ್ಯಕ್ಷೆ ದೃಶ್ಯ ಕೆ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.