32 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.





ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು – ಸುಬ್ರಮಣ್ಯ ನಡುವೆ ರೈಲು ಸಂಚಾರ ಮತ್ತೆ ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒಟ್ಟಾಯಿಸಿದ್ದಾರೆ.
ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು ಎಂದು ಸಂಸದರು ಹೇಳಿದರು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ ಎಂದರು.

ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯೊಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಚೌಟರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.



Related posts

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk