ಮುಂಬಯಿ : ನಗರದ ಹಿರಿಯ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘ ಮುಂಬಯಿ ಇದರ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅ. 4 ರಂದು ಸಂಜೆ 4 ರಿಂದ ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮವನ್ನು ಗೋರೆಗಾಂವ್ ಪೂರ್ವದ ಜೆ. ಪಿ. ನಗರ ರೋಡ್ ನಂಬರ್ ೨ ಫ್ರಾಗ್ನ್ಯ ಬೋಧಿನಿ ಹೈಸ್ಕೂಲ್ ಇಲ್ಲಿ ಕುಲಾಲ ಸಂಘ ಮುಂಬಯಿ ಅಧ್ಯಕ್ಷರಾದ ರಘು ಎ. ಮೂಲ್ಯ, ಪಾದೆ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಮಲಾಡ್ ಪೂರ್ವದ ಗೋವಿಂದ್ ನಗರದ ಆಜಿ ಬಾಬೂ ರೋಡ್ ನಲ್ಲಿರುವ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ (ಉನ್ನತಾಧಿಕಾರಿ) ಜಯ ಮೋಹನ್ ಬಂಗೇರ ಆಗಮಿಸಲಿರುವರು.
ಸಂಘದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಗೌರವ ಅಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಉಪಾಧ್ಯಕ್ಷರಾದ ಡಿ. ಐ. ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಬಿ. ಸಾಲಿಯಾನ್, ಗೌರವ ಕೋಶಾಧಿಕಾರಿ ಜಯ ಎಸ್. ಅಂಚನ್, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಪರವಾಗಿ ಕಾರ್ಯಾಧ್ಯಕ್ಷ ಆನಂದ ಕುಲಾಲ್, ಉಪ ಕಾರ್ಯಾಧ್ಯಕ್ಷ ಅರುಣ್ ಬಂಗೇರ, ಕಾರ್ಯದರ್ಶಿ ಸತೀಶ್ ಬಂಗೇರ, ಕೋಶಾಧಿಕಾರಿ ಮುಂಡಪ್ಪ ಮೂಲ್ಯ, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಪರವಾಗಿ ಕಾರ್ಯಾಧ್ಯಕ್ಷೆ ಆಶಾಲತಾ ಮೂಲ್ಯ, ಉಪ ಕಾರ್ಯಾಧ್ಯಕ್ಷೆ ರತ್ನ ಡಿ. ಕುಲಾಲ್, ಕಾರ್ಯದರ್ಶಿ ಆರತಿ ಸಾಲ್ಯಾನ್, ಕೋಶಾಧಿಕಾರಿ ಭಾರತಿ ಆರ್ಖ್ಯಾನ್ , ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಪುಷ್ಪ ಕುಲಾಲ್, ಎಲ್ಲಾ ಸಮಿತಿಗಳ ಸದಸ್ಯರು, ಮಹಿಳಾ ವಿಭಾಗ ಹಾಗು ಯುವ ವಿಭಾಗವು ವಿನಂತಿಸಿದೆ.