ಬಂಟರ ಸಂಘ ಮುಂಬಯಿಯ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ “ಆಟಿಡೊಂಜಿ – ಬಂಟ ಕೂಟ” ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ. ಕಾರ್ಯಕ್ರಮವು ಆಗಸ್ಟ್ 4, ರವಿವಾರ ಸಂಜೆ ಗಂಟೆ 6:30 ಕ್ಕೆ ಸರಿಯಾಗಿ ಹೋಟೆಲ್ ಸನ್ ಶೈನ್ ಇನ್ ಮೀರಾ ರೋಡ್ (ಪೂ) ಇಲ್ಲಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್ ರವೀಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿದೆ ಇದೇ ವೇದಿಕೆಯಲ್ಲಿ ಡಾ| ಆರ್.ಕೆ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಎಲ್ಲರಿಗೂ ವಿದ್ಯೆ ಮತ್ತು ವೈದ್ಯಕೀಯ ನೆರವು ಸಿಗುವಂತಹ ಸೇವೆಯ ಹೊಸ ಯೋಚನೆ ಮತ್ತು ಯೋಜನೆಯಾದ ಸಂಜೀವಿನಿ ಉದ್ಘಾಟನೆಗೊಳ್ಳಲಿದೆ. ಬಂಟರ ಸಂಘದ ಎಲ್ಲಾ ಒಂಬತ್ತು ಪ್ರಾದೇಶಿಕ ಸಮಿತಿಯ ಸದಸ್ಯರಿಗಾಗಿ ಈ ಯೋಜನೆಯನ್ನು ಬೆಳಕಿಗೆ ತರಲಾಗುತ್ತಿದೆ. ನಮ್ಮ ಜಾತಿ ಬಾಂಧವರ ಮಕ್ಕಳು ಯಾವುದೇ ಕಾರಣಕ್ಕೂ ವಿದ್ಯೆಯಿಂದ ವಂಚಿತರಾಗಬಾರದು ಎಂಬ ಬಲವಾದ ಅಭಿಲಾಷೆ ಈ ಸಂಜೀವಿನಿಯ ಲೋಕಾರ್ಪಣೆಯ ಉದ್ದೇಶ. ಐದು ಸಾವಿರದಿಂದ ಪ್ರಾರಂಭಿಸಿ ಐದು ಲಕ್ಷ ರೂಪಾಯಿವರೆಗಿನ ಔಷದಾದಿ ಆರೋಗ್ಯ ವೆಚ್ಚದ ಸಂಪೂರ್ಣ ಜವಾಬ್ದಾರಿ ಈ ಮೂಲಕ ವಹಿಸಿಕೊಳ್ಳಲಾಗುತ್ತದೆ
ಈ ಕಾರ್ಯಕ್ರಮಕ್ಕೆ ಹಿಂದಿ ಚಲನಚಿತ್ರ ನಟ ಮಹೇಶ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಾದೇಶಿಕ ಸಮಿತಿಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಭಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮೇಲ್ವಿಚಾರಣೆಯಲ್ಲಿ ಊರಿನ ಬಗೆ ಬಗೆಯ ತಿಂಡಿಗಳನ್ನು ತಾವೇ ತಯಾರಿಸಿ ತರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ ಶೆಟ್ಟಿ, ಗೌ ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಜತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಜತೆ ಕೋಶಾಧಿಕಾರಿ ಶಶಿಧರ ಶೆಟ್ಟಿ ಇನ್ನಂಜೆ, ಸಮನ್ವಯಕರಾದ ಖಾಂದೇಶ್ ಭಾಸ್ಕರ್ ಶೆಟ್ಟಿ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ ಸವಿನ್ ಶೆಟ್ಟಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಬಂಟ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯ ಸಂಚಾಲಕ ಶಿವಪ್ರಸಾದ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಅರವಿಂದ ಎ. ಶೆಟ್ಟಿ, ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು , ಕೋಶಾಧಿಕಾರಿ ಶಂಕರ್ ಶೆಟ್ಟಿ ಬೋಳ, ಜೊತೆ ಕಾರ್ಯದರ್ಶಿ ರಮೇಶ್ ಶೆಟ್ಟಿ ಸಿದ್ದಕಟ್ಟೆ, ಜತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಶಿಕ್ಷಣ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಎಸ್ ಎಸ್ ಶೆಟ್ಟಿ ಮತ್ತು ಋಷಭ್ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆ ಸುಜಾತ ಪಿ. ಶೆಟ್ಟಿ ,ಕಾರ್ಯದರ್ಶಿ : ಸುಮಂಗಳ ಕಣಂಜಾರ್ , ಕೋಶಾಧಿಕಾರಿ ವಂದನ ಶೆಟ್ಟಿ , ಜೊತೆ ಕಾರ್ಯದರ್ಶಿ ಶಿಲ್ಪ ಶೆಟ್ಟಿ, ಜೊತೆ ಕೋಶಾಧಿಕಾರಿ ಅಶ್ವಿನಿ ಶೆಟ್ಟಿ ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.