July 22, 2026
Mumbai News Kannada
ತುಳುನಾಡು

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ







ಕಾಪು, ಆ. 4: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ರವಿವಾರ ಕಾಪು ಪೇಟೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹಾಲೆ ಮರದ ತೊಗಟೆಯ ಕಷಾಯವನ್ನು‌ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿಯ ಸದಸ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಮುಂಜಾನೆ ಬೆಳಪುವಿನಿಂದ ಸಂಗ್ರಹಿಸಿ ತಂದ ಹಾಲೆ ಮರದ ತೊಗಟೆಯಲ್ಲಿ ಸುಮಾರು 100 ಲೀಟರ್ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಅದರ ಜತೆಗೆ ಮೆಂತೆ‌ ಪಾಯಸವನ್ನೂ ಸರ್ವಧರ್ಮೀಯರಿಗೆ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿ ಗೌರವಾಧ್ಯಕ್ಷ ಭಾಸ್ಕರ್ ಅಂಚನ್, ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್, ಪದಾಧಿಕಾರಿಗಳಾದ ವಿಕ್ಕಿ ಪೂಜಾರಿ ಮಡುಂಬು, ಅತಿಥ್ ಸುವರ್ಣ ಪಾಲಮೆ, ದೀಪಕ್ ಕುಮಾರ್ ಎರ್ಮಾಳು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸುಜನ್ ಎಲ್. ಸುವರ್ಣ, ಅನಿಲ್‌ ಅಮೀನ್‌ ಕಾಪು, ಅಶ್ವಿನಿ ನವೀನ್, ಸಂಧ್ಯಾ ಬಿ. ಕೋಟ್ಯಾನ್, ಇನ್ನಂಜೆ ಬಿಲ್ಲವ‌ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ, ಸ್ಥಳೀಯರಾದ ಶಿವಾನಂದ ಪೂಜಾರಿ ಮುನ್ನ, ರಮೇಶ್ ಪೂಜಾರಿ‌ ಮಲ್ಲಾರು, ಅಶ್ವಿನಿ ಜಿ. ಕೋಟ್ಯಾನ್, ಸಂದೇಶ್ ಪೂಜಾರಿ, ರವಿ ಪೂಜಾರಿ ಮೊದಲಾದವರು ಸಹಕರಿಸಿದರು.



Related posts

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk