ಡೊಂಬಿವಲಿ ನಗರದ ಹಿರಿಯ ಧಾರ್ಮಿಕ ಸಂಸ್ಥೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ಆಗಸ್ಟ್ 16ರ ಶುಕ್ರವಾರದಂದು ಮಂಡಳಿಯ ಭಜನಾ ಮಂದಿರದಲ್ಲಿ ಸಂಜೆ 6.00 ರಿಂದ 8.30 ರವರೆಗೆ ವರಮಹಾಲಕ್ಷ್ಮಿ ಪೂಜೆ ನಡೆಯಲಿರುವುದು.
ಸರ್ವ ಭಕ್ತಾದಿಗಳು ದೇವಿ ಪೂಜಾ ಸಂದರ್ಭದಲ್ಲಿ ಉಪಸ್ಥಿತರಿದ್ದು ತೀರ್ಥಪ್ರಸಾದ ಸ್ವೀಕರಿಸಿ ಪುನೀತರಾಗಬೇಕೆಂದು ಮಂಡಳಿಯ ಧರ್ಮದರ್ಶಿ ಆಶೋಕ್ ದಾಸು ಶೆಟ್ಟಿ, ಅಧ್ಯಕ್ಷ ಗೋಪಾಲ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲಾಸಿನಿ ಶೆಟ್ಟಿ, ಕಾರ್ಯಾಕಾರಿ ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
