32 C
Mumbai
March 7, 2026
Mumbai News Kannada
ಸುದ್ದಿ

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ





ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶವಿಲ್ಲದೆ ಇದ್ದು ಸಾರ್ವಜನಿಕರು ಸಂಕಷ್ಟಕ್ಕೆ ಈಡಾಗಿರುತ್ತಾರೆ. ಪಡುಬಿದ್ರೆ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೆಜಮಾಡಿ, ಎರ್ಮಾಳು, ತೆಂಕ, ಬೆಳಪು, ಶಿರ್ವ, ಮುದರಂಗಡಿ ಹಾಗೂ ಕಾರ್ಕಳದ ಕಡೆಯಿಂದ ನೂರಾರು ಜನರು ಬಾಂಬೆಯಿಂದ ಪ್ರಯಾಣಿಸುವರಿಗೆ ಪಡುಬಿದ್ರೆ ಮಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ತ್ವಗಂಧ ರೈಲ್ವೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮುಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ. ಆದ್ದರಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಲ್ಲಿ ಸೂಕ್ತ ಕ್ರಮ ವಹಿಸುವಂತೆ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಪುರಸಭೆ ಸದಸ್ಯರಾದ ಹರಿಣಾಕ್ಷಿ, ಶೈಲೇಶ್, ರತ್ನಾಕರ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



Related posts

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk