
ಮೀನುಗಾರಿಕಾ ರಜೆ ಮುಗಿದ ಬಳಿಕ ಪ್ರಕ್ಷುಬ್ದಗೊಂಡಿರುವ ಸಮುದ್ರ ರಾಜನನ್ನು ಶಾಂತಗೊಳಿಸುವ ಸಾಂಪ್ರದಾಯವೇ ಸಮುದ್ರ ಪೂಜೆ. ಪ್ರತಿ ವರ್ಷ ನೂಲಾ ಹುಣ್ಣಿಮೆಯಂದು ಮೀನುಗಾರರು ಸಮುದ್ರ ಪೂಜೆ ಮಾಡುವ ಸಂಪ್ರದಾಯವಿದೆ

ಅದರಂತೆ ಇಂದು ಬೆಳ್ಳಿಗೆ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಮುದ್ರ ಪೂಜೆ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಈ ಬಾರಿಯ ಮೀನುಗಾರಿಕಾ ಋತುವಿನಲ್ಲಿ ಹೇರಳ ಮತ್ಸ್ಯ ಸಂಪತ್ತಿನ ಮೂಲಕ ಮೀನುಗಾರರ ಬದುಕು ಸಮೃದ್ಧವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ವಿವಿಧ ಮೀನುಗಾರ ಸಂಘಟನೆಗಳ ಪ್ರಮುಖರು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
